ಶಿವಮೊಗ್ಗ: ನಾವು 105 ಶಾಸಕರು ಹೊಂದಿದ ಹುಲಿಗಳು ನಾವು ಸರಕಾರ ಬೀಳಿಸುವ ಪ್ರಯತ್ನ ಮಾಡಲ್ಲ, ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಅವರು ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಮ್ಮನ್ನು ಮುಟ್ಟುವ ಶಕ್ತಿ ಯಾರಿಗೂ ಇಲ್ಲ. ಮೈತ್ರಿ ಸರಕಾರ ಬೇಡ ಅಂತ ಕಾಂಗ್ರೆಸ್ ಶಾಸಕರೇ ಹೇಳ್ತಿದ್ದಾರೆ. ಕಾಂಗ್ರೆಸ್ ನಲ್ಲಿ ಹೇಳೋರು ಕೇಳೋರು ಯಾರೂ ಇಲ್ಲ ಎಂದರು ವಿಧಾನ ಸಭೆ ವಿಸರ್ಜನೆಗೆ ಅವಕಾಶದ ಕುರಿತು ಕೆಳಿದ ಪ್ರಶ್ನೆಗೆ ಉತ್ತರಿಸಿದ ಅವರು ಈ ಕುರಿತು ಕೇಂದ್ರದ ಬಿಜೆಪಿ ನಾಯಕರು ತೀರ್ಮಾನ ಮಾಡ್ತಾರೆ ಎಂದು ಈಶ್ವರಪ್ಪ ಮಾರ್ಮಿಕವಾಗಿ ಉತ್ತರಿಸದರು.
ಜಿಂದಾಲ್ ಗೆ ಭೂಮಿ ಕೊಡುವ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು. ಚುನಾವಣೆಯಲ್ಲಿ ಹೀನಾಯವಾಗಿ ಸೋತ ಮೇಲೂ ಈ ತೀರ್ಮಾನ ಕೈಗೊಂಡಿದೆ. ಇದನ್ನು ಸರ್ಕಾರ ಕ್ಯಾನ್ಸಲ್ ಮಾಡಬೇಕು. ಇಲ್ಲದಿದ್ದರೆ ಬಿಜೆಪಿ ನೇತೃತ್ವದಲ್ಲಿ ರಾಜ್ಯ ವ್ಯಾಪಿ ಹೋರಾಟ ಮಾಡಲಾಗುವುದು ಎಂದು ಕೆ.ಎಸ್ ಈಶ್ವರಪ್ಪ ಎಚ್ಚರಿಕೆ ನೀಡಿದರು.
30ರಂದು ಮೋದಿ ಪ್ರಮಾಣ ವಚನ ಹಿನ್ನೆಲೆಯಲ್ಲಿ ಶಿವಮೊಗ್ಗದ ಪ್ರತಿ ಮನೆಗೂ ಲಾಡು ವಿತರಣೆ ಮಾಡ್ತೇವೆಎಂದು ಈ ಸಂದರ್ಭದಲ್ಲಿ ತಿಳಿಸಿದರು.
೧೦೫ ಪ್ರಾಣಿಗಳಾ. ಹಾಗಾದರೆ ಇವರು ಮನುಷ್ಯರಲ್ಲವೆ