ಕಲಬುರಗಿ: ಕೊರೋನಾ ಸೋಂಕಿನಿಂದ ಕಲಬುರಗಿಯ ವರ್ಧಾ ನಗರದ 55 ವರ್ಷದ ಪುರುಷ (172279) ನಿಧನರಾಗಿರುವ ಬಗ್ಗೆ ಮಂಗಳವಾರ ದೃಢವಾಗಿದ್ದು, ಇದರಿಂದ ಕೊರೋನಾ ಸೋಂಕಿಗೆ ಜಿಲ್ಲೆಯಲ್ಲಿ ಇದೂವರೆಗೆ ಮೃತರಾದವರ ಸಂಖ್ಯೆ 142ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ.
ತೀವ್ರ ಉಸಿರಾಟ ತೊಂದರೆ ಹಿನ್ನಲೆಯಿಂದ ಇವರು ಆ.10 ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಆ.11 ರಂದು ನಿಧನ ಹೊಂದಿದ್ದಾರೆ ಎಂದು ಡಿ.ಸಿ. ಶರತ್ ಬಿ. ತಿಳಿಸಿದರು.