ಬೆಂಗಳೂರು : ಇಲ್ಲಿನ ಕೆ.ಜೆ.ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಪೊಲೀಸರ ಗುಂಡೇಟಿಗೆ ಮೂವರು ಯುವಕರು ಸಾವನ್ನಪ್ಪಿದ್ದಾರೆ. ಪುಲಕೇಶಿನಗರ ಶಾಸಕ ಅಖಂಡ ಶ್ರೀನಿವಾಸ್ ಸಂಬಂಧಿ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಮಾಡಿದ ಅವಹೇಳನಕಾರಿ ಪೋಸ್ಟ್ ದೊಡ್ಡ ಗಲಭೆಗೆ ಕಾರಣವಾಯ್ತು. ಇದರಿಂದ ಉದ್ರಿಕ್ತ ಗುಂಪು ಶಾಸಕರ ಮನೆ ಮೇಲೆ ಕಲ್ಲು ತೂರಾಟ ನಡೆಸಿ, ಬೆಂಕಿ ಹಚ್ಚಲಾಗಿತ್ತು. ಬಳಿಕ ಕೆ.ಜೆ.ಹಳ್ಳಿ ಪೊಲೀಸ್ ಠಾಣೆಯ ಮುಂದೆ ಯುವಕ ಗುಂಪು ದಂದಾಲೆ ನಡೆಸಿದ್ರು. ಈ ವೇಳೆ ಗುಂಪು ಚೆದರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದರು.
ಕೆ.ಜೆ.ಹಳ್ಳಿ ಪೊಲೀಸರು ಎಚ್ಚರಿಕೆ ಕೊಟ್ಟರು ಯುವಕರು ಹೋಗದಿದ್ದಾಗ ಅನಿವಾರ್ಯವಾಗಿ ಪೊಲೀಸರು ಗೋಲಿಬಾರ್ ಮಾಡಿದ್ದಾರೆ. ಈ ವೇಳೆ ಪೊಲೀಸರ ಗೋಲಿಬಾರ್ ಗೆ ಮೂವರು ಯುವಕರು ಸಾವನ್ನಪ್ಪಿದ್ದಾರೆ. ಹಲವು ಯುವಕರಿಗೆ ಗುಂಡು ಬಿದಿದ್ದು,ಗಾಯಗೊಂಡಿದ್ದಾರೆ.
ಪೊಲೀಸರು ಎಷ್ಟೇ ಮನವಿ ಮಾಡಿದ್ರು, ಕೇಳದಿದ್ದಾಗ ಕೊನೆಯದಾಗಿ ಗುಂಡು ಹಾರಿಸಲಾಗಿದೆ.ಉದ್ರಿಕ್ತ ಗುಂಪು ಪೊಲೀಸ್ ಠಾಣೆ ಹಾಗೂ ಸಿಬ್ಬಂದಿ ಮೇಲೆ ಕಲ್ಲೂ ತೂರಾಟ ನಡೆಸಿದ್ದಾರೆ.ಹಲವು ಕಡೆ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟ ಉಂಟಾಗಿದೆ. ಅನೇಕ ಗಾಡಿಗಳಿಗೆ ಬೆಂಕಿ ಹಚ್ಚಿದ್ದಾರೆ.
ಇನ್ನು ಈ ಘಟನೆ ಹಿನ್ನಲೆ ಪೋಸ್ಟ್ ಮಾಡಿದ ಆರೋಪದ ಮೇಲೆ ನಿನ್ನೆಯೇ ಆರೋಪಿ ಬಂಧಿಸಲಾಗಿದೆ..ಇನ್ನು ಮತ್ತೊಂದೆಡೆ ದಾಂದಲೆ ನಡೆಸಿದ 147 ಮಂದಿಯನ್ನು ಪೂರ್ವ ವಿಭಾಗ ಹಾಗೂ ಸಿಸಿಬಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಕೆ.ಜಿ ಹಳ್ಳಿ,ಡಿ.ಜೆ.ಹಳ್ಳಿ ಸುತ್ತಮುತ್ತ 144 ಸೆಕ್ಷನ್ ಜಾರಿ ಮಾಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.
ಸದ್ಯ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದು,ಹೆಚ್ಚಿನ ಪೊಲೀಸರನ್ನು ಭಧ್ರತೆಗೆ ನಿಯೋಜಿಸಲಾಗಿದೆ. ಈಗ ಹಿರಿಯ ಪೊಲೀಸ್ ಅಧಿಕಾರಿಗಳು ಸಭೆ ನಡೆಸುತ್ತಿದ್ದಾರೆ.