ಡಿಎಲ್.ಇಡಿ, ಡಿಪಿ.ಇಡಿ ಕೋರ್ಸ್‍ಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

0
52

ಕಲಬುರಗಿ: ಪ್ರಸಕ್ತ 2020ನೇ ಸಾಲಿನಲ್ಲಿ ಡಿಎಲ್.ಇಡಿ/ ಡಿಪಿ.ಇಡಿ ಮತ್ತು ಡಿ.ಪಿ.ಎಸ್.ಇ. ಕೋರ್ಸುಗಳಿಗೆ ಪ್ರವೇಶ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಮಲಾಪುರ ಡಯಟ್‍ನ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಚಾರ್ಯರು/ ಉಪನಿರ್ದೇಶಕರು (ಅಭಿವೃದ್ಧಿ) ಅವರು ತಿಳಿಸಿದ್ದಾರೆ.

ಅರ್ಹ ವಿದ್ಯಾರ್ಥಿಗಳು ಇಲಾಖೆಯ www.schooleducation.kar.nic.in ವೆಬ್‍ಸೈಟ್‍ದಿಂದ ನಿಗದಿತ ಅರ್ಜಿ ನಮೂನೆಯನ್ನು ಡೌನ್‍ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ 2020ರ ಅಗಸ್ಟ್ 31ರ ಸಂಜೆ 5.30 ರೊಳಗಾಗಿ ಕಮಲಾಪುರ ತಾಲೂಕಿನ ಡಯಟ್‍ನ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಕಚೇರಿಯಲ್ಲಿ ಸಲ್ಲಿಸಬೇಕು. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ 08478-221346ಗೆ ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here