ಚಿಂಚೋಳಿ: ತಾಲ್ಲೂಕಿನ ಸೇಡಂ ವಿಧಾನ ಸಭಾ ಕ್ಷೇತ್ರದ ರಾಯಕೋಡ್ ಗ್ರಾಮ ಪ್ರವೇಶದ ಮುಖ್ಯ ರಸ್ತೆ ಕಚ್ಚಾ ರಸ್ತೆಯಾಗಿದ್ದು, ಮಳೆ ನೀರು ಬಂದು ಸಂಪೂರ್ಣ ಹದಗೆಟ್ಟಿ ನಿವಾಸಿಗಳು ಪ್ರತಿನಿತ್ಯ ಪರದಾಡು ಸ್ಥಿತಿ ನಿರ್ಮಾಣವಾಗಿದೆ.
ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ್ ಅವರು ಗ್ರಾಮಕ್ಕೆ ನಿರ್ಲಕ್ಷ್ಯಿಸುತ್ತಿರುವುದರಿಂದ ಗ್ರಾಮದಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಶಾಸಕರು ಗ್ರಾಮದ ಸಮಸ್ಯೆಗಳನ್ನು ನಿವಾರಿಸಲು ಮಲತಾಯಿ ಧೋರಣೆಯನ್ನು ಅನುಸರಿಸುತ್ತಿದ್ದಾರೆ ಎಂದು ಗ್ರಾಮದ ನಿವಾಸಿಯಾದ ವಿಜಯಕುಮಾರ ಬಿರಾದಾರ್ ಅವರು ಆರೋಪಿಸಿದ್ದಾರೆ.
ಗ್ರಾಮ ಪ್ರವೇಶಿಸುವ ಪ್ರಮುಖ ರಸ್ತೆಯ ಕಾಮಗಾರಿಕೆ ಶೀಘ್ರವಾಗಿ ಪ್ರಾರಂಭಿಸಿ ನಿವಾಸಿಗಳಿಗೆ ಆಗುತ್ತಿರುವ ತೊಂದರೆಗಳನ್ನು ಸರಿಪಡಿಸಬೇಕೆಂದು ಗ್ರಾಮದ ನಿವಾಸಿಗಳು ಮನವಿ ಮಾಡಿದ್ದಾರೆ.