ಆಳಂದ: ಕಳೆದ ಹಲವು ವರ್ಷಗಳಿಂದ ದೇಶದಲ್ಲಿ ಆಳ್ವಿಕೆ ಮಾಡಿರುವ ಬಿಜೆಪಿಯೇತರ ಪಕ್ಷಗಳು ಅಲ್ಪ ಸಂಖ್ಯಾತರನ್ನು ಕೇವಲ ಮತ ಬ್ಯಾಂಕವನ್ನಾಗಿ ಮಾಡಿಕೊಂಡಿವೆ ಎಂದು ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಅಭಿಪ್ರಾಯಪಟ್ಟರು.
ಆಳಂದ ಪಟ್ಟಣದಲ್ಲಿ 2019-20ನೇ ಸಾಲಿನ ಕರ್ನಾಟಕ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ “ಶ್ರಮ ಶಕ್ತಿ”ಯೋಜನೆಯ ಅಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಆದೇಶ ಪ್ರತಿಯನ್ನು ವಿತರಿಸಿ ಮಾತನಾಡಿ, ರಾಜ್ಯ ಸರ್ಕಾರ ಎಲ್ಲ ವರ್ಗದ ಏಳಿಗೆಗೆ ಶ್ರಮವಹಿಸಲು ಸಿದ್ಧವಾಗಿದೆ ಎಂದು ಹೇಳಿದರು.
ಅಲ್ಪ ಸಂಖ್ಯಾತರ ಮೋರ್ಚಾದ ತಾಲೂಕ ಅಧ್ಯಕ್ಷ ಮಹೆಬೂಬ್ ಶೇಖ್ ಮಾತನಾಡಿ, ಅಲ್ಪಸಂಖ್ಯಾತ ಜನರ ಕಲ್ಯಾಣಕ್ಕೆ ಶಾಸಕರು ಶ್ರಮಿಸುತ್ತಿದ್ದಾರೆ ರಾಜ್ಯ ಸರ್ಕಾರದಿಂದ ನ್ಯಾಯಯುತವಾಗಿ ಸಿಗಬೇಕಾದ ಸೌಲಭ್ಯಗಳನ್ನು ಜನರಿಗೆ ತಲುಪಿಸುವಲ್ಲಿ ಅಪಾರವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಹೀಗಾಗಿ ತಾಲೂಕಿನಲ್ಲಿ ಅಲ್ಪ ಸಂಖ್ಯಾತರು ಶಾಸಕ ಸುಭಾಷ್ ಆರ್ ಗುತ್ತೇದಾರರ ಜೊತೆಗೆ ನಿಲ್ಲಬೇಕಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಆಳಂದ ಬಿಜೆಪಿ ಮಂಡಲ ಅಧ್ಯಕ್ಷರಾದ ಆನಂದ ಕೆ. ಪಾಟೀಲ್, ಮುಖಂಡರಾದ ಅಶೋಕ ಗುತ್ತೇದಾರ, ಮಲ್ಲಣ್ಣ ನಾಗೂರೆ ರಮ್ಮು ಅನ್ಸಾರಿ, ಮೀರು ಬಿಜೆಪಿ ತಾಲೂಕಾ ಪ್ರಧಾನ ಕಾರ್ಯದರ್ಶಿಗಳಾದ ಪ್ರಕಾಶ ಮಾನೆ, ಶರಣು ಕುಮಸಿ ಹಾಗೂ ಶಶಿಕಾಂತ ಪಾಟೀಲ ತೆಲೆಕುಣಿ ಇದ್ದರು.