ಜಿ.ಟಿ.ಟಿ.ಸಿ. ಕೇಂದ್ರ: ಡಿಪ್ಲೋಮಾ ಕೋರ್ಸ್‍ಗಳಿಗೆ ಪ್ರವೇಶ ಪಡೆಯಲು ಅರ್ಜಿ ಆಹ್ವಾನ

0
75

ಕಲಬುರಗಿ: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಕೇಂದ್ರದಲ್ಲಿ 2020-21 ನೇ ಸಾಲಿನಲ್ಲಿ ಡಿಪ್ಲೋಮಾ ಇನ್ ಟೂಲ್ ಆ್ಯಂಡ್ ಡೈ ಮೇಕಿಂಗ್ ಹಾಗೂ ಡಿಪ್ಲೋಮಾ ಇನ್ ಪ್ರಿಶಿಷನ್ ಮ್ಯಾನುಪ್ಯಾಕ್ಚರಿಂಗ್ ತರಬೇತಿಗಳಿಗೆ ಪ್ರವೇಶ ಪಡೆಯಲು ಎಸ್.ಎಸ್.ಎಲ್.ಸಿ ಪಾಸಾದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಜಿ.ಟಿ.ಟಿ.ಸಿ. ಪ್ರಾಂಶುಪಾಲರಾದ ಮೋಹನ ರಾಠೋಡ ಅವರು ತಿಳಿಸಿದ್ದಾರೆ.

ಡಿಪ್ಲೋಮಾ ಇನ್ ಟೂಲ್ ಆ್ಯಂಡ್ ಡೈ ಮೇಕಿಂಗ್ ಕೋರ್ಸ್‍ನಲ್ಲಿ 55 ಸೀಟು ಮತ್ತು ಕೈಗಾರಿಕಾ ಪ್ರಾಯೋಜಿತ 5 ಸಿಟ್ ಲಭ್ಯವಿರುತ್ತದೆ. ಡಿಪ್ಲೋಮಾ ಇನ್ ಪ್ರಿಶಿಷನ್ ಮ್ಯಾನುಪ್ಯಾಕ್ಚರಿಂಗ್‍ನಲ್ಲಿ 60 ಸೀಟ್‍ಗಳು ಲಭ್ಯವಿರುತ್ತದೆ. ಐ.ಟಿ.ಐ. ಪಾಸಾದ ವಿದ್ಯಾರ್ಥಿಗಳು ನೇರವಾಗಿ 2ನೇ ವರ್ಷಕ್ಕೆ ಪ್ರವೇಶ ಪಡೆಯಲು ಅರ್ಹರು. ತರಬೇತಿ ಅವಧಿಯು 3 ವರ್ಷ ಇರುತ್ತದೆ. ಈ ತರಬೇತಿ ಅವಧಿಯಲ್ಲಿ 10,000 ರೂ. ರಿಂದ 15,000 ರೂ. ತರಬೇತಿ ಭತ್ಯೆ ನೀಡಲಾಗುತ್ತದೆ

Contact Your\'s Advertisement; 9902492681

ಆಸಕ್ತಿವುಳ್ಳ ವಿದ್ಯಾರ್ಥಿಗಳು https://karunadu.karnataka.gov.in/gttc ಅಥವಾ https://gttc.co.in ವೆಬ್‍ಸೈಟ್‍ನಲ್ಲಿ ಆನ್‍ಲೈನ್ ಮೂಲಕ 2020ರ ಆಗಸ್ಟ್ 28 ರೊಳಗಾಗಿ ಅರ್ಜಿ ಸಲ್ಲಿಸಬೇಕು ಅಥವಾ ಕಲಬುರಗಿ ಜಿ.ಟಿ.ಟಿ.ಸಿ. ಕೇಂದ್ರಕ್ಕೆ ಖುದ್ದಾಗಿ ಬಂದು ಅರ್ಜಿ ಸಲ್ಲಿಸಬಹುದಾಗಿದೆ. 2020ರ ಅಕ್ಟೋಬರ್ 2 ರಂದು ಸಂದರ್ಶನದ ಮೂಲಕ ರೋಷ್ಟರ್ ಮತ್ತು ಮೆರಿಟ್ ಆಧಾರದ ಮೇಲೆ ವಿಧ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಶೇ. 30 ರಷ್ಟು ಸೀಟುಗಳು ವಿದ್ಯಾರ್ಥಿನಿಯರಿಗೆ ಮೀಸಲಿಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಸಂತ್ರಾಸವಾಡಿದಲ್ಲಿರುವ ಜಿ.ಟಿ.ಟಿ.ಸಿ. ಕೇಂದ್ರವನ್ನು ಅಥವಾ ಕೇಂದ್ರದ ದೂರವಾಣಿ ಸಂಖ್ಯೆ 08472-295163 ಹಾಗೂ ಮೊಬೈಲ್ ಸಂಖ್ಯೆ 8453327166, 9141630308 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here