ಕಲಬುರಗಿ: ಕೊರೊನಾ ಸೋಂಕಿನ ಭಯದ ವಾತಾವರಣದಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ. ಪರೀಕ್ಷೆಯನ್ನು ಎದುರಿಸಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ “ನಿರ್ಭಯ ಸಾಧಕ” ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ ಎಂದು ಸ್ನೇಹ ಸಂಗಮ ವಿವಿದೊದ್ದೇಶ ಸೇವಾ ಸಂಘದ ಕಾರ್ಯದರ್ಶಿ ನಂದೀಶ್ವರ ಜೆ. ಪೂಜಾರಿ ತಿಳಿಸಿದ್ದಾರೆ.
ಶ್ರೀನಿವಾಸ ಸರಡಗಿ ಗ್ರಾಮದ ಚಿನ್ನದ ಕಂತಿ ಚಿಕ್ಕವೀರೇಶ್ವರ ಸಂಸ್ಥಾನ ಹೀರೆಮಠ ಹಾಗೂ ಅಖಿಲ ಭಾರತ ಯುವಜನ ಒಕ್ಕೂಟ (ಎಐವೈಎಫ್) ಸಹಯೋಗದೊಂದಿಗೆ ಇದೇ ಆ. 21 ರಂದು ಬೆಳಿಗ್ಗೆ 10.30ಕ್ಕೆ ಶ್ರೀಮಠದ ಆವರಣದಲ್ಲಿ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು,, ನಂತರ ತಾಜಸುಲ್ತಾನಪುರ, ಪಾಳಾ, ಕಡಣಿ ಹಾಗೂ ಕಲಬುರಗಿ ನಗರದಲ್ಲಿ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸ್ನೇಹ ಸಂಗಮ ವಿವಿದೊದ್ದೇಶ ಸೇವಾ ಸಂಘದ ಅಧ್ಯಕ್ಷರಾದ ನ್ಯಾಯವಾದಿ ಹಣಮಂತರಾಯ ಎಸ್. ಅಟ್ಟೂರ ತಿಳಿಸಿದ್ದಾರೆ.
ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು 9945571036 ಮೊಬೈಲ್ ನಂಬರಿಗೆ ಸಂಪರ್ಕಿಸಿ ನೊಂದಾಯಿಸಿಕೊಳ್ಳಬಹುದೆಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.