ಒತ್ತುವರಿ ತೆರವುಗೊಳಿಸುವ ಸಂಬಂಧ ಸಭೆ ನಿಗದಿಪಡಿಸಲು ಸೂಚನೆ

0
46

ಬೆಂಗಳೂರು: ಮಲಪ್ರಭಾ ನದಿ ತೀರದಲ್ಲಿ ನಡೆಯುತ್ತಿರುವ ಒತ್ತುವರಿ ತೆರವುಗೊಳಿಸುವ ಸಂಬಂಧ, ತುರ್ತು ಪರಿಹಾರವನ್ನು ಕಂಡುಕೊಳ್ಳುವ ಸಲುವಾಗಿ ಬೆಳಗಾವಿ, ಧಾರವಾಡ, ಗದಗ ಮತ್ತು ಬಾಗಲಕೋಟೆ ಜಿಲ್ಲೆಗಳ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆಯನ್ನು ನಿಗದಿಪಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡುವಂತೆ ಮಾನ್ಯ ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಅವರು ಜಲಸಂಪನ್ಮೂಲ ಸಚಿವರಿಗೆ ತಿಳಿಸಿದ್ದಾರೆ.

ಉತ್ತರ ಕರ್ನಾಟಕದ ಮಲಪ್ರಭಾ ನದಿ ತೀರದಲ್ಲಿ ಮಾನವನ ಅತಿಯಾದ ದುರಾಸೆಯಿಂದ ಒತ್ತುವರಿ ಪರಿಣಾಮವಾಗಿ ಪ್ರವಾಹ ಉಂಟಾಗುತ್ತಿದೆ. ಇದರಿಂದಾಗಿ ಬೆಳಗಾವಿ, ಧಾರವಾಡ ಗದಗ ಮತ್ತು ಬಾಗಲಕೋಟೆ ನಾಲ್ಕು ಜಿಲ್ಲೆಗಳ ನದಿ ಪಾತ್ರದಲ್ಲಿ ಪ್ರವಾಹದಿಂದ ಅಪಾರ ಆಸ್ತಿಪಾಸ್ತಿಗೆ ಹಾನಿಯುಂಟಾಗುತ್ತಿದೆ. ಆದ್ದರಿಂದ ಮಲಪ್ರಭಾ ನದಿ ಪಾತ್ರದ ಒತ್ತುವರಿ ತೆರವುಗೊಳಿಸುವುದಕ್ಕೆ ಸರ್ಕಾರದಿಂದ ಕ್ರಮ ಕೈಗೊಳ್ಳುವ ಸಲುವಾಗಿ ಉಪಮುಖ್ಯಮಂತ್ರಿಗಳು ಸಭೆಯನ್ನು ನಡೆಸಿದ್ದರು.

Contact Your\'s Advertisement; 9902492681

ಈ ಸಭೆಯಲ್ಲಿ ಮಲಪ್ರಭಾ ನದಿಯ ಉಳಿವಿಗೆ ಮತ್ತು ಒತ್ತುವರಿ ತೆರವುಗೊಳಿಸಿ, ಪ್ರವಾಹವನ್ನು ನಿಯಂತ್ರಿಸುವ ಸಲುವಾಗಿ ಶಾಶ್ವತ ಪರಿಹಾರವನ್ನು ಕಂಡುಕೊಳ್ಳುವುದು ಸೂಕ್ತವೆಂದು ತೀರ್ಮಾನಿಸಲಾಯಿತು.

ಆದುದರಿಂದ ನದಿ ತೀರದ ಒತ್ತುವರಿ ತೆರವಿಗೆ ತುರ್ತು ಪರಿಹಾರವನ್ನು ಕಂಡುಕೊಳ್ಳುವ ಸಲುವಾಗಿ ಬೆಳಗಾವಿ, ಧಾರವಾಡ, ಗದಗ ಮತ್ತು ಬಾಗಲಕೋಟೆ ಜಿಲ್ಲೆಗಳ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆಯನ್ನು ಕೂಡಲೇ ನಿಗದಿಪಡಿಸುವಂತೆ ಅವರು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here