ಕಲಬುರಗಿ: ಪ್ರಸಕ್ತ 2020-21ನೇ ಸಾಲಿನ ವಿಶೇಷ ಘಟಕ ಉಪಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಅಂತರರಾಷ್ಟ್ರೀಯ ಹಾಗೂ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗೆ (ಸ್ವಯಂ ಉದ್ಯೋಗ ಹೊಂದಲು) ಜಿಮ್ ಸ್ಥಾಪನೆಗಾಗಿ ಸಹಾಯಧನ ನೀಡಲಾಗುತ್ತಿದೆ. ಇದಕ್ಕಾಗಿ ಅರ್ಹ ಕ್ರೀಡಾಪಟುಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಅರ್ಹ ಕ್ರೀಡಾಪಟುಗಳು ನಿಗದಿತ ಅರ್ಜಿ ನಮೂನೆಯನ್ನು ಕಲಬುರಗಿಯ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಚೇರಿಯಂದ ಪಡೆದು ಭರ್ತಿ ಮಾಡಿ ಇಲಾಖೆಯಿಂದ ದೃಢೀಕರಣ ಪಡೆದುhttp://karunadu.karnataka.gov.in/dyes ವೆಬ್‍ಸೈಟ್‍ನಲ್ಲಿ ಅಪಲೋಡ ಮಾಡಬೇಕು.
ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು 2020ರ ಸೆಪ್ಟೆಂಬರ್ 10 ಕೊನೆಯ ದಿನವಾಗಿದೆ. ಕೊನೆಯ ದಿನಾಂಕದ ನಂತರ ಬರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಹಾಕಿ ತರಬೇತುದಾರ ಸಂಜಯ ಬಾಣದ ಇವರ ಮೊಬೈಲ್ ಸಂಖ್ಯೆ 9844029235 ಗೆ ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.