ಆಳಂದ: ಮತಕ್ಷೇತ್ರದ ಶಾಸಕ ಸುಭಾಷ್ ಆರ್ ಗುತ್ತೇದಾರರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು ಚಿಕಿತ್ಸೆಗಾಗಿ ಬೆಂಗಳೂರಿನಲ್ಲಿ ದಾಖಲಾಗಿದ್ದಾರೆ.
ಇತ್ತೀಚಿಗೆ ಅವರು ಕೊರೋನಾ ಪರೀಕ್ಷೆಗೆ ಒಳಗಾಗಿದ್ದರು. ಬುಧುವಾರ ಬಂದ ವರದಿಯಲ್ಲಿ ಅವರಿಗೆ ಪಾಸಿಟಿವ್ ಬಂದಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಕನ್ನಿಂಗಹ್ಯಾಮ್ ರಸ್ತೆಯಲ್ಲಿರುವ ಫೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ತಮ್ಮ ಪ್ರಾಥಮಿಕ ಸಂಪರ್ಕದಲ್ಲಿದ್ದ ಎಲ್ಲರೂ ಕಡ್ಡಾಯವಾಗಿ ಪರೀಕ್ಷೆಗೆ ಒಳಗಾಗಬೇಕು. ತಾವು ಚಿಕಿತ್ಸೆಯ ನಂತರ ಸರ್ಕಾರದ ನಿಯಮಾವಳಿಯಂತೆ ಹೋಮ್ ಐಸೋಲೇಶನನಲ್ಲಿ ಇರಲಿದ್ದು ಪೂರ್ಣ ಗುಣಮುಖರಾದ ನಂತರ ಮತ್ತೆ ಎಂದಿನಂತೆ ತಮ್ಮ ಸೇವೆ ಮುಂದುವರೆಸುತ್ತೇನೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.