ಕಲಬುರಗಿ: ಸಮಾಜ ಕಲ್ಯಾಣ ಇಲಾಖೆಯಿಂದ 2020-21ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಪಿ.ಯು.ಸಿ., ಪಾಲಿಟೆಕ್ನಿಕ್ ಪಾಸಾದವರಿಗೆ 20,000ರೂ., ಪದವಿ ಪಾಸಾದವರಿಗೆ 25,000ರೂ., ಸ್ನಾತಕೋತ್ತರ ಪದವಿ ಪಾಸಾದವರಿಗೆ 30,000ರೂ. ಹಾಗೂ ಕೃಷಿ, ವೈದ್ಯಕೀಯ, ಇಂಜಿಯರಿಂಗ್ ಪಾಸಾದವರಿಗೆ 35,000ರೂ.ಗಳ ಪ್ರೋತ್ಸಾನಧನ ನೀಡಲಾಗುತ್ತದೆ. ವಿದ್ಯಾರ್ಥಿಗಳು ಇಲಾಖೆಯ www.sw.kar.nic.in ವೆಬ್‍ಸೈಟ್‍ನಲ್ಲಿ ಆನ್‍ಲೈನ್ ಮೂಲಕ ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಆಧಾರ ಕಾರ್ಡ, ಎಲ್ಲ ಸೆಮಿಸ್ಟರ್‍ಗಳ ಅಂಕಪಟ್ಟಿ, ಜಾತಿ ಪ್ರಮಾಣಪತ್ರ, ಬ್ಯಾಂಕ್ ಖಾತೆ ಸಂಖ್ಯೆ ಹಾಗೂ ವಿದ್ಯಾರ್ಥಿಯ ಪಾಸ್‍ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಅರ್ಜಿ ಸಲ್ಲಿಸಬೇಕು.
ಅರ್ಜಿಗಳನ್ನು ಆನ್‍ಲೈನ್ ಮೂಲಕ ಸಲ್ಲಿಸಿ ಆನ್‍ಲೈನ್ ಅರ್ಜಿ ಪ್ರತಿ ಸಂಬಂಧಪಟ್ಟ ಕಾಲೇಜಿನ ಪ್ರಾಚಾರ್ಯರಿಂದ ಎಲ್ಲ ದಾಖಲೆಗಳನ್ನು ದೃಢೀಕರಿಸಿ ಅರ್ಜಿಯನ್ನು ಕಲಬುರಗಿ ಮಿನಿ ವಿಧಾನಸೌಧ ಎದುರಿಗೆಯಿರುವ ಐವಾನ ಶಾಹಿ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯ ಎರಡನೇ ಮಹಡಿಯಲ್ಲಿ 2020ರ ಸೆಪ್ಟೆಂಬರ್ 30 ರೊಳಗಾಗಿ ಸಲ್ಲಿಸಬೇಕು. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.
Yes