ಕಲಬುರಗಿ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ರಾಜ್ಯ ಸಂಪನ್ಮೂಲ ಕೇಂದ್ರ ಯೋಜನೆಯಡಿ ಖಾಲಿಯಿರುವ ತಾತ್ಕಾಲಿಕ ಕೌನ್ಸಿಲರ್-01 (ಸಂಪನ್ಮೂಲ ವ್ಯಕ್ತಿ) ಹುದ್ದೆ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಅಭ್ಯರ್ಥಿಯು ಕನಿಷ್ಠ ಯಾವುದಾದರೊಂದು ವಿಷಯದಲ್ಲಿ ಪದವಿ ಹೊಂದಿರಬೇಕು. ಎಂ.ಎಸ್.ಡಬ್ಲ್ಯೂ, ಎಂ.ಎ., (ಒSW,ಒಂ) ಮಹಿಳಾ ಅಧ್ಯಯನ ಆದವರಿಗೆ ಆದ್ಯತೆ ನೀಡಲಾಗುವುದು. ಮಹಿಳಾ ಅಭಿವೃದ್ದಿ ಕ್ಷೇತ್ರದಲ್ಲಿ 3 ರಿಂದ 5 ವರ್ಷಗಳ ಕಾರ್ಯನಿರ್ವಹಿಸಿದ ಅನುಭವ ಹೊಂದಿರಬೇಕು. ಅಭ್ಯರ್ಥಿಯು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಪ್ರವಾಸ ಕೈಗೊಳ್ಳಲು ದೈಹಿಕ ಸಾಮಥ್ರ್ಯ ಹೊಂದಿರಬೇಕು. ಈ ಹುದ್ದೆಯು ತಾತ್ಕಾಲಿಕ ಹುದ್ದೆಯಾಗಿದ್ದು, ನಿಗದಿತ ಮಾಸಿಕ ಗೌರವಧನ 12,000 ರೂ. ಹಾಗೂ 2000 ರೂ.ಗಳ ಪ್ರಯಾಣ ಭತ್ಯೆ ನೀಡಲಾಗುವುದು.
ಅರ್ಹ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ದೃಢೀಕೃತ ಪ್ರಮಾಣಪತ್ರಗಳು ಹಾಗೂ ಮಹಿಳಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿದ ಅನುಭವದ ಮೂಲ ಪ್ರಮಾಣ ಪತ್ರಗಳು ಹಾಗೂ ಇತರೆ ಹೆಚ್ಚುವರಿ ಅನುಭವದ ದಾಖಲಾತಿಗಳೊಂದಿಗೆ ತಮ್ಮ ಪ್ರಸ್ತಾವನೆಗಳನ್ನು ಕಲಬುರಗಿ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ 2020ರ ಸೆಪ್ಟೆಂಬರ್ 10 ರೊಳಗಾಗಿ ಸಲ್ಲಿಸಬೇಕು. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಮೇಲ್ಕಂಡ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.