ಕೊಪ್ಪಳ: ರಾಜ್ಯ ಸರ್ಕಾರದಿಂದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಬರುವ ವಿದ್ಯಾರ್ಥಿವೇತನಗಳು ಇನ್ನೂ ಬಿಡುಗಡೆಯಾಗದ್ದರಿಂದ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಸಮಸ್ಯೆಯುಂಟಾಗುತ್ತಿದೆ, ಶೀಘ್ರ ವಿದ್ಯಾರ್ಥಿವೇತನ ಬಿಡುಗಡೆಗೊಳಿಸುವಂತೆ ಒತ್ತಾಯಿಸಿ ಕೊಪ್ಪಳ ಜಿಲ್ಲೆಯ ಅಲ್ಪಸಂಖ್ಯಾತರ ಇಲಾಖೆಗೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ನಿಯೋಗವು ಭೇಟಿ ಮಾಡಿ ಸಮಸ್ಯೆಗಳ ಬಗ್ಗೆ ಚರ್ಚಿಸಿ, ವಿದ್ಯಾರ್ಥಿವೇತನ ತಕ್ಷಣ ಬಿಡುಗಡೆ ಮಾಡಲು ಒತ್ತಾಯಿಸಲಾಯಿತು.