ಕಣ್ಣಿಗೆ ಕಪ್ಪು ಬಟ್ಟೆ ಕಟ್ಟಿ ಧರಿಸಿ ಖಾಸಗಿ ಶಾಲಾ ಶಿಕ್ಷಕರ ಪ್ರತಿಭಟನೆ

0
70

ಜೇವರ್ಗಿ: ಇಲ್ಲಿನ ಖಾಸಗಿ ಶಾಲಾ ಹಾಗೂ ಪದವಿಪೂರ್ವ ಕಾಲೇಜು ಉಪನ್ಯಾಸಕರು ಹಾಗೂ ಶಿಕ್ಷಕರು ಸೇರಿದಂತೆ ಅನುದಾನರಹಿತ ಶಾಲೆಗಳ ಕರ್ತವ್ಯ ನಿರ್ವಹಿಸುತ್ತಿರುವ ಹಲವಾರು ಜನ ಪದವೀಧರ ಶಿಕ್ಷಕರು ಕಣ್ಣಿಗೆ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿದರು.

ಶಿಕ್ಷಕರ ದಿನಾಚರಣೆ ಯಾದ ನಿನ್ನೆ ಇಲ್ಲಿ ಜಮಾಯಿಸಿದ ಖಾಸಗಿ ಅನುದಾನರಹಿತ ಪ್ರಾಥಮಿಕ ಪ್ರೌಢ ಹಾಗೂ ಪದವಿಪೂರ್ವ ಕಾಲೇಜು ಸೇರಿದಂತೆ ಪದವಿ ಕಾಲೇಜುಗಳ ಉಪನ್ಯಾಸಕರು ತಮ್ಮ ಅಳಲನ್ನು ವ್ಯಕ್ತಪಡಿಸಿ ಕೊಂಡರು.
ಕೋವಿಡ್ 19 ರ ಹಿನ್ನೆಲೆಯಲ್ಲಿ ಸರಕಾರವು ಖಾಸಗಿ ಶಾಲೆಗಳ ಶಿಕ್ಷಕರ ಮೇಲೆ ಮಲತಾಯಿ ಧೋರಣೆಯನ್ನು ತಾಳುತ್ತದೆ. ಇದರಿಂದಾಗಿ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ದುಡಿಯುತ್ತಿರುವ ಶಿಕ್ಷಕರ ಗೋಳು ಕೇಳದಂತಾಗಿದೆ ಎಂದು ಬೇಸರವನ್ನು ವ್ಯಕ್ತಪಡಿಸಿ, ಕಣ್ಣಿಗೆ ಕಪ್ಪು ಬಟ್ಟೆ ಧರಿಸಿ ಪ್ರತಿಭಟಿಸಿದರು.

Contact Your\'s Advertisement; 9902492681

ಸ್ನಾತಕೋತ್ತರ ಹಾಗೂ ಶಿಕ್ಷಕರ ವೃತ್ತಿ ತರಬೇತಿಗಳನ್ನು ಪಡೆದುಕೊಂಡಿರುವ ಸಾವಿರಾರು ಜನ ಉಪನ್ಯಾಸಕರು ಹಾಗೂ ಶಿಕ್ಷಕರು ಕೆಲಸವಿಲ್ಲದೆ ಕುಟುಂಬಸಮೇತ ಉಪವಾಸ ಮಲಗು ಪರಿಸ್ಥಿತಿ ಉಂಟಾಗಿದೆ. ಶಾಲಾ-ಕಾಲೇಜುಗಳು ಪ್ರಾರಂಭವಾಗುವುದು ಹಾಗೂ ಕುಟುಂಬ ನಿರ್ವಹಣೆಗೆ ಸಂಬಳವನ್ನು ಪಡೆಯುವ ದಿನ ಬರುವುದು ಯಾವಾಗ ಎಂದು ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ.

ಖಾಸಗಿ ಶಾಲಾ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರ ಪರಿಸ್ಥಿತಿಯನ್ನು ಅರಿತು ಸರಕಾರವು ಪರಿಹಾರ ಕಾರ್ಯಕ್ಕೆ ಮುಂದಾಗಬೇಕಾಗಿದೆ ಎಂದು ಮನವಿ ಪತ್ರವನ್ನು ಸಲ್ಲಿಸಿದರು.

ಪ್ರತಿಭಟನೆಯಲ್ಲಿ ನವ ಕಲ್ಯಾಣ ಕರ್ನಾಟಕ ಖಾಸಗಿ ಶಾಲಾ ಶಿಕ್ಷಕರ ಸಂಘಟನೆಯ ತಾಲೂಕ ಅಧ್ಯಕ್ಷರಾದ ಧನರಾಜ ರಾಥೋಡ್, ಸೇರಿದಂತೆ ಮಲ್ಲಿಕಾರ್ಜುನ್ ಇಬ್ರಾಹಿಂಪುರ್, ಆಮ್ ಆದ್ಮಿ ಪಕ್ಷದ ಸಂಚಾಲಕ ಈರಣ್ಣ ಗೌಡ, ಸಮಾಜಸೇವಕರಾದ ಸಿದ್ದು ಮಸ್ಕಿ, ಜಗದೀಶ್ ಉಕ್ಕಿನಾಳ, ಮಡಿವಾಳಪ್ಪ ಗವಾರ್, ಸೇಕ್ ಮಹಬೂಬ್ ಅಲಿ, ಸೇರಿದಂತೆ ಖಾಸಗಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುವ ಶಿಕ್ಷಕರು ಭಾಗವಹಿಸಿದ್ದರು.

ಶಿಕ್ಷಕರು ಉಪನ್ಯಾಸಕರು ಪ್ರತಿಭಟನೆಯಲ್ಲಿ ಭಾಗವಹಿಸಿ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಪತ್ರವನ್ನು ಸಲ್ಲಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here