ಕಲಬುರಗಿ: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ಸಂಸ್ಥೆಯ ನೂತನ ಅಧ್ಯಕ್ಷರಾದ ರಾಜಕುಮಾರ್ ಪಾಟೀಲ್ ತೇಲ್ಕೂರ ಅವರು ಇಂದು ಪದಗ್ರಹಣ ಮಾಡಿದರು.
ಉಪಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸಂಗಪ್ಪ ಸವದಿ, ಕೆಕೆಆರ್ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ, ಎನ್ಇಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ರಾದ ಎಂ. ಕೂರ್ಮಾರಾವ್ ಮುಂತಾದವರು ಇದ್ದರು.