ಬೀದರ: ಕಲ್ಯಾಣ ಕರ್ನಾಟಕ ಭಾಗದ ಪ್ರತಿಷ್ಠಿತಿ ಶಿಕ್ಷಣ ಸಂಸ್ಥೆಯೊಂದರಲ್ಲಿ ಶಾಹೀನ್ ಸಂಸ್ಥೆ 2020-21ನೇ ಸಾಲಿನ ಬೀದರ್, ಭಾಲ್ಕಿ, ಹುಮನಾಬಾದ್, ಔರಾದ್ ಹಾಗೂ ಬಸವಕಲ್ಯಾಣ ಸೇರಿದಂತೆ ಜಿಲ್ಲೆಯ ತನ್ನ ಆರು ಕಾಲೇಜು ಶಾಖೆಗಳಲ್ಲಿ ಒಟ್ಟು ೧೦೬ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ ಒದಗಿಸುವ ಮೂಲಕ ಬಡ ವಿದ್ಯಾರ್ಥಿಗಳಿಗೆ ನೆರವಾಗಿದೆ.
ಜಿಲ್ಲಾ ಆಡಳಿತವು ಖಾಸಗಿ ಶಿಕ್ಷಣ ಸಂಸ್ಥೆಗಳ ಸಹಯೋಗದೊಂದಿಗೆ ಬಡ ವಿದ್ಯಾರ್ಥಿಗಳಿಗೆ ಉಚಿತ ಪಿಯು ಪ್ರವೇಶ ಒದಗಿಸಲು ಬೀದರ‍್ನಲ್ಲಿ ನಡೆಸಿದ ಕೌನ್ಸೆಲಿಂಗ್‌ಗೆ ಒಟ್ಟು ೧,೨೭೬ ವಿದ್ಯಾರ್ಥಿಗಳು ಹಾಜರಾಗಿದ್ದರು. ೬೯೫ ಸ್ಥಾನಗಳ ಪೈಕಿ ೬೪೫ ಸ್ಥಾನಗಳಿಗೆ ವಿದ್ಯಾರ್ಥಿಗಳನ್ನು ಶಾಹೀನ್ ಸಂಸ್ಥೆ ಆಯ್ಕೆ ಮಾಡಿದೆ.
ಈ ಕುರಿತು ಶಾಹೀನ್ ಶಿಕ್ಷಣ ಸಮೂಹ ಸಂಸ್ಥೆಯ ಅಧ್ಯಕ್ಷ ಡಾ. ಅಬ್ದುಲ್ ಖದೀರ್ ಮತಾನಾಡಿ ಜಿಲ್ಲಾ ಆಡಳಿತ ಪ್ರತಿ ವರ್ಷ ಜಿಲ್ಲೆಯ ಖಾಸಗಿ ಪದವಿಪೂರ್ವ ಕಾಲೇಜುಗಳಲ್ಲಿ ಉಚಿತ ಪ್ರವೇಶ ಕಲ್ಪಿಸುತ್ತಿರುವ ಕಾರಣ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಡಾ. ರಾಮಚಂದ್ರನ್ ಅವರ ಆಸಕ್ತಿಯ ಫಲವಾಗಿ ಈ ವರ್ಷವೂ ಜಿಲ್ಲೆಯ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ ಅವಕಾಶ ದೊರಕಿದೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.