ಹೊಸ ಶಿಕ್ಷಣ ನೀತಿ ಸಮರ್ಪಕ ಅನುಷ್ಠಾನ ಎಲ್ಲಾ ಶಿಕ್ಷಣ ಸಂಸ್ಥೆಗಳ ಜವಾಬ್ದಾರಿ: ಪ್ರೊ ಡಿ.ಪಿ.ಸಿಂಗ್

0
33

ಕಲಬುರಗಿ: ಶಿಕ್ಷಣ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆ ತರಲು ಕೇಂದ್ರ ಸರ್ಕಾರವು ದೇಶಕ್ಕೆ ಹೊಸ ಶಿಕ್ಷಣ ನೀತಿ ಪ್ರಕಟಿಸಿದ್ದು, ಇದನ್ನು ಸಮರ್ಪಕ ಅನುಷ್ಠಾನಗೊಳಿಸುವ ಹೊಣೆಗಾರಿಕೆ ದೇಶದ ಎಲ್ಲಾ ವಿಶ್ವವಿದ್ಯಾಲಯಗಳು ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳ ಮೇಲಿದೆ ಎಂದು ವಿಶ್ವವಿದ್ಯಾಲಯ ಧನಸಹಾಯ ಆಯೋಗದ ಅಧ್ಯಕ್ಷ ಪ್ರೊ ಡಿ.ಪಿ.ಸಿಂಗ್ ಹೇಳಿದರು.

ಬುಧವಾರ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಐದನೇ ಘಟಿಕೋತ್ಸವದಲ್ಲಿ ಆನ್‍ಲೈನ್ ಮೂಲಕ ಮುಖ್ಯ ಭಾಷಣಕಾರರಾಗಿ ಭಾಗವಹಿಸಿ ಮಾತನಾಡಿದರು.

Contact Your\'s Advertisement; 9902492681

ಪರಸ್ಪರ ಸಹಕಾರದೊಂದಿಗೆ ಉನ್ನತ ಶಿಕ್ಷಣದ ಗುಣಮಟ್ಟ ಕಾಪಾಡುವುದರ ಜೊತೆಗೆ ಮತ್ತಷ್ಟು ಶಕ್ತಿಯುತಗೊಳಿಸಬೇಕಾಗಿದ್ದು, ಇದಕ್ಕಾಗಿ ಶಿಕ್ಷಣ ಸಂಸ್ಥೆಗಳನ್ನು ಪುನರ್‍ರಚಿಸಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.

ಪ್ರಾಚೀನ ಶೈಕ್ಷಣಿಕ ವ್ಯವಸ್ಥೆಯಿಂದ ಅನೇಕ ಕಲೆಗಳ ಕಲ್ಪನೆಯೊಂದಿಗೆ ಪ್ರಸಕ್ತ 21ನೇ ಶತಮಾನಕ್ಕೆ ಅನುಗುಣವಾಗಿ ಕಲೆ, ಭಾಷೆ, ವಿಜ್ಞಾನ, ಸಾಮಾಜಿಕ ವಿಜ್ಞಾನ, ತಾಂತ್ರಿಕ ಮತ್ತು ವೃತ್ತಿಪರ ಕೌಶಲ್ಯಗಳನ್ನು ವ್ಯಕ್ತಿಗತವಾಗಿ ವೃದ್ಧಿಸುವುದರ ಜೊತೆಗೆ ಸಮಾಜದೊಂದಿಗೆ ಕೂಡುಕೊಳ್ಳುವಿಕೆ, ಸಂವಹನ, ಚರ್ಚೆ ಮತ್ತು ಸಂವಾದದಂತಹ ಕೌಶಲ್ಯಗಳನ್ನು ಪ್ರತಿ ವಿದ್ಯಾರ್ಥಿಗಳಲ್ಲಿ ಬೆಳೆಸಿ ಅವರನ್ನು ಪರಿಣಿತರನ್ನಾಗಿ ರೂಪಿಸುವುದು ಹೊಸ ನೀತಿಯ ಉದ್ದೇಶವಾಗಿದೆ ಎಂದು ಡಿ.ಪಿ.ಸಿಂಗ್ ತಿಳಿಸಿದರು.

ಬಹು ವಿಭಾಗಗಳ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳನ್ನು ಸ್ಥಾಪಿಸುವ ಅವಶ್ಯಕತೆಯಿದೆ. ಇದಕ್ಕಾಗಿ ಸ್ವಾಯತ್ತ ಸಂಸ್ಥೆಗಳನ್ನು ಉತ್ತೇಜಿಸಬೇಕಾಗಿದೆ. ವಿದ್ಯಾರ್ಥಿಗಳ ಅನುಭವವನ್ನು ವೃದ್ಧಿಸಲು ಪಠ್ಯಕ್ರಮ, ಮೌಲ್ಯಮಾಪನ ಮತ್ತು ವಿದ್ಯಾರ್ಥಿ ಸಹಕಾರ ಪುನರುಜ್ಜೀವನಗೊಳಿಸುವುದು. ಆನ್‍ಲೈನ್ ಮತ್ತು ದೂರ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವುದು ಈ ಹೊಸ ನೀತಿಯ ಮುಖ್ಯ ಉದ್ದೇಶವಾಗಿದೆ ಎಂದರು.

ಸಾಲುಮರದ ತಿಮ್ಮಕ್ಕ ಸೇರಿ ಐವರಿಗೆ ಗೌರವ ಡಾಕ್ಟರೇಟ್: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ 5ನೇ ಘಟಿಕೋತ್ಸವದ ಅಂಗವಾಗಿ ಪರಿಸರವಾದಿ ಮತ್ತು ಸಮಾಜ ಸೇವಕಿ ಸಾಲುಮರದ ತಿಮ್ಮಕ್ಕ, ಜಾನಪದ ವಿದ್ವಾಂಸ ಎಂ.ಜಿ.ಬಿರಾದರ ಖ್ಯಾತ ಕಾದಂಬರಿಕಾರ ಎಸ್.ಎಲ್.ಭೈರಪ್ಪ, ಕವಿ ಚೆನ್ನವೀರ ಕಣವಿ ಹಾಗೂ ಬಾಹ್ಯಾಕಾಶ ವಿಜ್ಞಾನಿ ಕೆ.ಶಿವನ್ ಅವರಿಗೆ ಗೌರವ ಡಾಕ್ಟರೇಟ್ ಘೋಷಿಸಲಾಯಿತು. ಘಟಿಕೋತ್ಸವದಲ್ಲಿ ಭಾಗವಹಿಸಿದ್ದ ಜಾನಪದ ವಿದ್ವಾಂಸ ಎಂ.ಜಿ.ಬಿರಾದರ ಅವರಿಗೆ ವಿಶ್ವವಿದ್ಯಾಲಯದ ಕುಲಪತಿ ಪೆÇ್ರ.ಹೆಚ್.ಎಂ.ಮಹೇಶ್ವರಯ್ಯ ಅವರು ಗೌರವ ಡಾಕ್ಟರೇಟ್ ನೀಡಿ ಗೌರವಿಸಿದರು.

ಕೋವಿಡ್-19 ಹಿನ್ನೆಲೆಯಲ್ಲಿ ವಿವಿಧ ವಿಷಯಗಳಲ್ಲಿ ಹೆಚ್ಚಿನ ಅಂಕ ಪಡೆದ 39 ರ್ಯಾಂಕ್ ವಿದ್ಯಾರ್ಥಿಗಳಿಗೆ ಮತ್ತು ಪ್ರಬಂಧ ಮಂಡಿಸಿದ 25 ಜನ ವಿದ್ಯಾರ್ಥಿಗಳಿಗೆ ಅವರ ಅನುಪಸ್ಥಿತಿಯಲ್ಲಿ ಪದವಿ ಘೋಷಿಸಲಾಯಿತು. ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಅನ್‍ಲೈನ್ ಮೂಲಕವೇ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪೆÇ್ರ.ಎನ್.ಆರ್.ಶೆಟ್ಟಿ ಆನ್‍ಲೈನ್ ಮೂಲಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಘಟಿಕೋತ್ಸವದಲ್ಲಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಸಚಿವ ಪೆÇ್ರ.ಮುμÁ್ತಕ್ ಅಹ್ಮದ ಐ. ಪಟೇಲ್, ಪರೀಕ್ಷಾ ನಿಯಂತ್ರಣಾಧಿಕಾರಿ ಪೆÇ್ರ.ಬಿ.ಆರ್.ಕೆರೂರ, ಹಣಕಾಸು ಅಧಿಕಾರಿ ಪ್ರೊ. ಎಸ್. ಶಿವಾನಂದಮ್, ಕೋರ್ಟ್ ಸದಸ್ಯರು, ಕಾರ್ಯಕಾರಣಿ ಮಂಡಳಿ ಮತ್ತು ಶೈಕ್ಷಣಿಕ ಮಂಡಳಿ ಸದಸ್ಯರು, ವಿವಿಧ ವಿಭಾಗದ ಡೀನ್‍ಗಳು, ಪ್ರಾಧ್ಯಾಪಕರು ಇದ್ದರು. ಸಮ ಕುಲಪತಿ ಪೆÇ್ರ. ಜಿ.ಆರ್.ನಾಯಕ ವಂದಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here