ನ್ಯಾಯವಾದಿ ವೃತ್ತಿ ತರಬೇತಿಗಾಗಿ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ

0
54

ಕಲಬುರಗಿ: ಸಮಾಜ ಕಲ್ಯಾಣ ಇಲಾಖೆಯಿಂದ 2020-21ನೇ ಸಾಲಿನಲ್ಲಿ ಎರಡು ವರ್ಷಗಳ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿ ಪಡೆಯಲು ಅರ್ಹ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕಾನೂನು ಪದವೀಧದರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ಅರ್ಹ ಅಭ್ಯರ್ಥಿಗಳು ಇಲಾಖೆಯ www.sw.kar.nic.in ವೆಬ್‍ಸೈಟ್‍ನಲ್ಲಿ ಆನ್‍ಲೈನ್ ಮೂಲಕ ಅವಶ್ಯಕ ದಾಖಲಾತಿಗಳೊಂದಿಗೆ 2020ರ ನವೆಂಬರ್ 30 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಪಡೆದಿರಬೇಕು. ವಾರ್ಷಿಕ ಆದಾಯ 2.50 ಲಕ್ಷ ರೂ. ಮೀರಿರಬಾರದು. ಬಾರ್ ಕೌನ್ಸಿಲ್‍ನಲ್ಲಿ ನೋಂದಣಿಯಾಗಿರಬೇಕು. ಅಭ್ಯರ್ಥಿಗಳ ವಯೋಮಿತಿ 40ವರ್ಷ ಮೀರಿರಬಾರದು. ಹಿರಿಯ ನ್ಯಾಯವಾದಿಗಳ ಬಳಿ ತರಬೇತಿ ನಿಯೋಜನೆಗೊಂಡಿರಬೇಕು. ಜಾತಿ ಹಾಗೂ ಆದಾಯ ಪ್ರಮಾಣಪತ್ರವನ್ನು ತಹಶೀಲ್ದಾರರಿಂದ ದೃಢೀಕರಿಸಿ ಲಗತ್ತಿಸಬೇಕು.

Contact Your\'s Advertisement; 9902492681

ಆಯ್ಕೆಯಾದ ಕಾನೂನು ಪದವೀಧÀರರಿಗೆ 10,000 ರೂ.ಗಳ ಮಾಸಿಕ ತರಬೇತಿ ಭತ್ಯೆ ನೀಡಲಾಗುತ್ತದೆ. ಆನ್‍ಲೈನ್ ಮೂಲಕ ಸಲ್ಲಿಸಿದ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ 2020ರ ನವೆಂಬರ್ 27 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಸದರಿ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here