ಸುರಪುರ: ತಾಲೂಕಿನಾದ್ಯಂತೆ ಕಳೆದ ಅನೇಕ ದಿನಗಳಿಂದ ನಿರಂತರವಾಗಿ ಮಳೆ ಬೀಳುತ್ತಿರುವುದರಿಂದ ರೈತರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದು ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ಉಸ್ತಾದ ವಜಾಹತ್ ಹುಸೇನ್ ಒತ್ತಾಯಿಸಿದರು.
ಜೆಡಿಎಸ್ ಪಕ್ಷದಿಂದ ನಗರದ ತಹಸೀಲ್ ಕಚೇರಿ ಮುಂದೆ ಹಮ್ಮಿಕೊಂಡಿದ್ದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿ,ಮಹಾ ಮಳೆಯಿಂದಾಗಿ ತಾಲೂಕಿನಲ್ಲಿಯ ರೈತರ ಸಾವಿರಾರು ಎಕರೆಯಲ್ಲಿ ಬೆಳೆಯಲಾದ ಹತ್ತಿ ಭತ್ತ ಸಜ್ಜೆ ತೊಗರಿ ಸೇರಿದಂತೆ ಅನೇಕ ವಿವಿಧದ ಬೆಳೆಗಳು ತಂಪು ಹೆಚ್ಚಾಗಿ ಹಾಳಾಗಿವೆ.ಇದರಿಂದ ರೈತರು ತೀವ್ರ ತೊಂದರೆಗೆ ಒಳಗಾಗಿದ್ದಾರೆ.
ಆದರೆ ಈ ಯಾವುದೇ ಪ್ರದೇಶಗಳಿಗೆ ಕಂದಾಯ ಇಲಾಖೆಯ ಯಾವುದೇ ಅಧಿಕಾರಿಗಳು ಭೇಟಿ ನೀಡದೆ ನಿರ್ಲಕ್ಷ್ಯ ತೋರಲಾಗಿದೆ.ಆದ್ದರಿಂದ ಕೂಡಲೆ ಅಧಿಕಾರಿಗಳು ಹಾನಿಗೀಡಾದ ಬೆಳೆಗಳ ಬಗ್ಗೆ ಸಮೀಕ್ಷೆ ನಡೆಸಿ ಶೀಘ್ರವಾಗಿ ಸೂಕ್ತ ಪರಿಹಾರ ನೀಡಬೇಕು ಇಲ್ಲವಾದಲ್ಲಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಸಿದರು.
ನಂತರ ತಹಸೀಲ್ದಾರ ನಿಂಗಣ್ಣ ಬಿರಾದಾರ್ ಅವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಮುಖಂಡರಾದ ಜಿಲ್ಲಾ ಯುವ ಸಂಘಟನಾ ಕಾರ್ಯದರ್ಶಿ ತಿಪ್ಪಣ್ಣ ಪೊಲೀಸ್ ಪಾಟೀಲ್ ನ್ಯಾಯವಾದಿ ಸಂಗಣ್ಣ ಬಾಕ್ಲಿ ನಗರ ಪ್ರಧಾನ ಕಾರ್ಯದರ್ಶಿ ಶೌಕತ್ ಅಲಿ ಖುರೇಶಿ ಎಮ್.ಡಿ.ಖಾಜಾ ನಜೀರ್ ಅಹ್ಮದ್ ಗೋಪಾಲ ಬಾಗಲಕೋಟ ಅಲ್ತಾಫ್ ಸಗರಿ ಮಹ್ಮದ್ ಗೌಸ್ ಸಾಹುಕಾರ್ ಸೇರಿದಂತೆ ಅನೇಕರಿದ್ದರು.