ಹಿಂಗಾರು ಬಿತ್ತನೆಗೆ ಉಚಿತ ಬೀಜ ರಸಗೊಬ್ಬರ ನೀಡುವಂತೆ ಆಗ್ರಹ

0
137

ಕಲಬುರಗಿ: ಜಿಲ್ಲೆಯಾದ್ಯಂತ ಭಾರಿ ಮಳೆಯಿಂದಾಗಿ ಹಲವೆಡೆ ಮುಂಗಾರು ಬಿತ್ತನೆ ಮಾಡಿದ ಬೆಳೆಗಳು ನಾಶವಾಗಿವೆ. ಸಂಕಷ್ಟದಲ್ಲಿರುವ ರೈತರಿಗೆ ಸರಕಾರ ಹಿಂಗಾರು ಬಿತ್ತನೆಗೆ ಉಚಿತ ಬೀಜ ರಸಗೊಬ್ಬರ ನೀಡಬೇಕು ಎಂದು ಕನ್ನಡ ಭೂಮಿ ಜಾಗೃತಿ ಸಮಿತಿ ರಾಜ್ಯಾಧ್ಯಕ್ಷ ಲಿಂಗರಾಜ ಸಿರಗಾಪೂರ ಆಗ್ರಹಿಸಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ಮುಂಗಾರು ಬೆಳೆಗಳಾದ ಉದ್ದು,ಹೆಸರು, ಎಳ್ಳು ಬೆಳೆಗಳು ಅತಿವೃಷ್ಟಿಯಿಂದ ಹಾಳಾಗಿವೆ. ಜಮೀನುಗಳಲ್ಲಿ ನೀರು ನಿಂತಿದ್ದರಿಂದ ಜಿಲ್ಲೆಯ ವಾಣಿಜ್ಯ ಬೆಳೆ ತೊಗರಿ ಕೂಡ ಒಣಗಲು ಪ್ರಾರಂಭಿಸಿದೆ.ಪ್ರಮುಖ ಬೆಳೆಗಳು ಕೈಕೊಟ್ಟಿರುವುದರಿಂದ ರೈತರಿಗೆ ವಿಪರೀತ ಆರ್ಥಿಕವಾಗಿ ಸಂಕಷ್ಟ ಎದುರಾಗಿದೆ.ಬಿತ್ತನೆಗೆ ಸಾವಿರಾರು ರೂಪಾಯಿ ಖರ್ಚು ಮಾಡಿ, ನಂತರ ಬೆಳೆ ಬಾರದಿರುವುದರಿಂದ ರೈತರು ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Contact Your\'s Advertisement; 9902492681

ಸರಕಾರದಿಂದ ಸರಿಯಾಗಿ ಬೆಳೆ ಹಾನಿ ಪರಿಹಾರ ಕೂಡ ದೊರೆತಿಲ್ಲ.ಬೆಳೆ ಸಾಲ ಪಡೆಯುವಾಗ ಬ್ಯಾಂಕ್ ನವರು ಬೆಳೆ ವಿಮೆ ಹಣವನ್ನು ರೈತರಿಂದ ಪಡೆಯುತ್ತಾರೆ.ಆದರೆ ಅತೀವೃಷ್ಟಿ ಅಥವಾ ಅನಾವೃಷ್ಟಿಯಿಂದ ಬೆಳೆಗಳು ಹಾನಿಯಾದರೆ ವಿಮೆ ಹಣ ದೊರೆಯುವುದಿಲ್ಲ.ಇದು ಕೂಡ ರೈತರಿಗೆ ಹೊಡೆತ ಬೀಳುತ್ತದೆ.ವಿಮೆ ಕಂಪನಿಗಳು ರೈತರ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡುತ್ತಿವೆ.ಇಡೀ ದೇಶಕ್ಕೆ ಅನ್ನ ನೀಡುವ ರೈತನ ಜೀವನ ಭದ್ರತೆಗೆ ಸರಕಾರ ಯಾವುದೇ ಯೋಜನೆ ರೂಪಿಸಿಲ್ಲ.

ರೈತರ ಹೆಸರಲ್ಲಿ ಅಧಿಕಾರಕ್ಕೆ ಬರುವ ಸರ್ಕಾರಗಳು ನಂತರ ಅನ್ನದಾತನನ್ನೇ ಮರೆಯುತ್ತವೆ.ಇನ್ನಾದರೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರೈತರ ಬಗ್ಗೆ ಕಾಳಜಿ ವಹಿಸಿ ಅವರಿಗೆ ಆರ್ಥಿಕ ತೊಂದರೆಯಾಗದಂತೆ ಹಿಂಗಾರು ಬಿತ್ತನೆಗೆ ಉಚಿತವಾಗಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ನೀಡಬೇಕು.ಹಾಗೂ ರೈತರ ಪಂಪ್ ಸೆಟ್ ಗಳಿಗೆ ಉಚಿತವಾಗಿ ವಿದ್ಯುತ್ ಪೂರೈಸಬೇಕು.ಮಳೆಯಿಂದ ಹಾನಿಗೊಳಗಾದ ರೈತರಿಗೆ ಮನೆಗಳನ್ನು ನಿರ್ಮಿಸಿ ಕೊಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here