ಕಲಬುರಗಿ: ಫರತಾಬಾದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಟಂಟಂ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ವ್ಯಕ್ತಿ ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಿನ್ನೆ ನಡೆದಿದೆ.
ಹಾಗರಗುಂಡಗಿ ಗ್ರಾಮದ ನಿವಾಸಿ ಸಂತೋಷ ಮೇಲಿನಕೇರಿ ಮೃತಪಟ್ಟ ಬೈಕ್ ಸವಾರ ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಪುತ್ರ ಎಂದು ತಿಳಿದುಬಂದಿದೆ.
ಕಲಬುರಗಿ ಕಡೆಯಿಂದ ಬೈಕ್ ಮೇಲೆ ಹಾಗರಗುಂಡಗಿ ಗ್ರಾಮಕ್ಕೆ ಮರಳುವ ವೇಳೆ ತರಕಾರಿ ಸಾಗಿಸುತ್ತಿದ್ದ ಟಂಟಂ ವಾಹನ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡ ಸಂತೋಷ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಈ ಕುರಿತು ಕಲಬುರಗಿ ಗ್ರಾಮೀಣ ಪೊಲೀಸ್ ಠಾಣೆ ವ್ಯಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.