ಸೊನ್ನ ಬ್ಯಾರೇಜಿನಿಂದ 2.23 ಲಕ್ಷ ಕ್ಯುಸೆಕ್ ನೀರು ಬಿಡುಗಡೆ

0
43

ಕಲಬುರಗಿ: ಭೀಮಾ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಉಜನಿ ಮತ್ತು ವೀರ್ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಭೀಮಾ ನದಿಗೆ ಬಿಟ್ಟಿರುವುದರಿಂದ ಸೊನ್ನ ಬ್ಯಾರೇಜಿಗೆ 198000 ಕ್ಯುಸೆಕ್ ನೀರು ಒಳ ಹರಿವಾಗಿ ಬರುತ್ತಿದೆ.

ಗುರುವಾರ ಬೆಳಿಗ್ಗೆ 8 ಗಂಟೆಗೆ ಸೊನ್ನ ಬ್ಯಾರೇಜಿನಿಂದ ಭೀಮಾ ನದಿಗೆ 223000 ಕ್ಯುಸೆಕ್ ನೀರು ಹರಿಬಿಡಲಾಗಿದೆ ಎಂದು ಕರ್ನಾಟಕ ನೀರಾವರಿ ನಿಗಮ ನಿಯಮಿತ ಕಲಬುರಗಿ ವೃತ್ತದ ಅಧೀಕ್ಷಕ ಅಭಿಯಂತ ಜಗನ್ನಾಥ ಹಲಿಂಗೆ ತಿಳಿಸಿದ್ದಾರೆ.

Contact Your\'s Advertisement; 9902492681

ಹೀಗಾಗಿ ಬ್ಯಾರೇಜಿನ ಕೆಳ ಪಾತ್ರದಲ್ಲಿ ಬರುವ ಅಫಜಲಪೂರ, ಚಿತ್ತಾಪುರ, ಜೇವರ್ಗಿ ಹಾಗೂ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ನದಿ ಪಾತ್ರದ ಜನರು ನದಿ ದಂಡೆಗೆ ಹೋಗಬಾರದು ಮತ್ತು ತಮ್ಮ ಜಾನುವಾರಗಳೊಂದಿಗೆ ಸುರಕ್ಷತಾ ಕ್ರಮದೊಂದಿಗೆ ಎಚ್ಚರಿಕೆಯಿಂದಿರುವಂತೆ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here