ಕಲಬುರಗಿ: ಯಾತ್ರಿ ನಿವಾಸದಲ್ಲಿ ಪ್ರಾರಂಭಿಸಿರುವ ಕಾಳಜಿ ಕೇಂದ್ರದಲ್ಲಿನ ಪ್ರವಾಹ ಸಂತ್ರಸ್ತರಿಗೆ ಊಟ ಮತ್ತು ಕುಡಿಯುವ ನೀರಿನ ಸುಕ್ತ ವ್ಯವಸ್ಥೆ ಕಲ್ಪಿಸದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಪರಿಗಣಿಸಿ ಪಿಡಿಓ ಹಾಗೂ ಗ್ರಾಮ ಲೆಕ್ಕಾಧಿಕಾರಿಯನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ವಿ. ವಿ. ಜೋತ್ನ್ಯಾ ಆದೇಶ ಹೊರಡಿಸಿದ್ದಾರೆ.
ಅಫಜಲಪೂರ ತಾಲ್ಲೂಕಿನ ದೇವಲ ಗಾಣಗಾಪೂರದ ಯಾತ್ರಿ ನಿವಾಸದಲ್ಲಿ ಪ್ರವಾಹ ಸಂತ್ರಸ್ತರ ಕಾಳಜಿ ಕೇಂದ್ರದಕ್ಕೆ ಭೇಟಿ ನೀಡಿದ ವೇಳೆ ಸಂತ್ರಸ್ತರು ಜಿಲ್ಲಾಧಿಕಾರಿಗೆ ದೂರು ನೀಡಿದ ಹಿನ್ನೆಯಲ್ಲಿ ಕ್ರಮಕೈಗೊಳಲಾಗಿದೆ ಎಂದು ತಿಳಿದುಬಂದಿದೆ.
ಊಟ ಸರಿಯಾಗಿ ನೀಡುತ್ತಿಲ್ಲ, ಅನ್ನದಲ್ಲಿ ಹುಳು ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಸರಿ ಇಲ್ಲ ಎಂಬ ದೂರಿನ ಮೇರೆಗೆ ಕರ್ತವ್ಯ ಲೋಪಕ್ಕಾಗಿ ಪಿಡಿಒ ಗುರುನಾಥ ಹರಿದಾಸ ಮತ್ತು ಗ್ರಾಮ ಲೆಕ್ಕಾಧಿಕಾರಿ ಭಾಗ್ಯಶ್ರೀ ಯಳವಾರ ಅವರನ್ನು ಅಮಾನತುಗೊಳಿಸಿದ್ದಾರೆ.