ಸುರಪುರ: ಹುಣಸಗಿ ಪಟ್ಟಣದಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ಒಬ್ಬನನ್ನು ವಶಕ್ಕೆ ಪಡೆದ ಘಟನೆ ನಡೆದಿದೆ.
ಹುಣಸಗಿ ಪಟ್ಟಣದಲ್ಲಿನ ಲಾಡ್ಜ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂದು ಖಚಿತ ಮಾಹಿತಿ ಮೇರೆಗೆ ಸುರಪುರ ಠಾಣೆ ಪೊಲೀಸ್ ಇನ್ಸ್ಪೇಕ್ಟರ್ ಎಸ್.ಎಮ್.ಪಾಟೀಲ್ ಅವರ ನೇತೃತ್ವದ ತಂಡ ದಾಳಿ ನಡೆಸಿ ಯುವತಿಯನ್ನು ರಕ್ಷಣೆ ಮಾಡಿ ಒಬ್ಬನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.