ಸಾರ್ವಜನಿಕರು ಕುಡಿಯುವ ನೀರನ್ನು ಕಾಯಿಸಿ ಕುಡಿಯಲು ಮನವಿ

0
34

ಕಲಬುರಗಿ: ನಗರಕ್ಕೆ ನೀರು ಸರಬರಾಜು ಮಾಡುವ ಜಲಮೂಲಗಳಾದ ಭೀಮಾ, ಬೆಣ್ಣೆತೊರಾ ಮತ್ತು ಭೋಸ್ಗಾ ನದಿಗಳ ಮೇಲ್ಭಾಗದಲ್ಲಿ ಸತತವಾಗಿ ಮಳೆಯಾಗುತ್ತಿರುವುದರಿಂದ ಹಾಗೂ ಸೊನ್ನ ಬ್ಯಾರೇಜದಿಂದ ಭೀಮ ನದಿಗೆ ನೀರು ಬಿಟ್ಟಿರುವುದರಿಂದ ಪ್ರವಾಹದ ಜೊತೆಗೆ ಹರಿದು ಬರುತ್ತಿರುವ ನೀರಿನಲ್ಲಿ ಮಣ್ಣಿನ ಅಂಶ ಹೆಚ್ಚಾಗಿರುತ್ತದೆ. ಜಲಮಂಡಳಿಯು ನೀರನ್ನು ಶುದ್ಧೀಕರಿಸಿ, ಸೂಪರ ಕ್ಯೂರಿನೇಶನ್ ಮಾಡಿ ನೀರು ಸರಬರಾಜು ಮಾಡಲಾಗುತ್ತಿದೆ.

ಆದ್ಯಾಗೂ ಸಹ ಕಲಬುರಗಿ ನಗರದ ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮವಾಗಿ ಕುಡಿಯುವ ನೀರನ್ನು ಕಾಯಿಸಿ ಆರಿಸಿ ಸೋಸಿ ಕುಡಿಯಬೇಕು.

Contact Your\'s Advertisement; 9902492681

ಸಾರ್ವಜನಿಕರು ಜಲಮಂಡಳಿಯೊಂದಿಗೆ ಸಹಕರಿಸಬೇಕೆಂದು ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಕಲಬುರಗಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here