ಕಲಬುರ್ಗಿ: ಭೀಮಾ ನದಿ ದಡದಲ್ಲಿರುವ ತಾಲ್ಲೂಕಿನ ಹಲವು ಗ್ರಾಮಗಳಿಗೆ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ತಾಹಿರ್ ಹುಸೇನ್ ಭೇಟಿ ನೀಡಿ ಹಾನಿ ಪರಿಶೀಲನೆ ನಡೆಸಿದರು.
ಕೋನಾಹಿಪ್ಪರಗಿ, ಕೋಬಾಳ,ರದ್ದೇವಾಡಗಿ ಸೇರಿದಂತೆ ಹಲವು ಗ್ರಾಮಗಳಿಗೆ ಭೇಟಿ ನೀಡಿ ಗ್ರಾಮಸ್ಥರ ಸಮಸ್ಯೆ ಆಲಿಸಿ, ಸರ್ಕಾರದಿಂದ ಸೂಕ್ತ ಪರಿಹಾರದ ಒದಗಿಸುವ ಭರವಸೆ ನೀಡಿದರು.
ಭೀಮಾನದಿಗೆ ಮಹಾರಾಷ್ಟ್ರದಿಂದ ಹೆಚ್ಚಿನ ನೀರು ಹರಿಸಿದ್ದರಿಂದ ರದ್ದೇವಾಡಗಿ, ಮಾಹೂರ, ಮಂದ್ರವಾಡ, ಕೋಬಾಳ ಗ್ರಾಮಗಳು ಸೇರಿದಂತೆ ೩೦ ಹಳ್ಳಿಗಳು ಜಲಾವೃತಗೊಂಡಿದ್ದರಿಂದ ಗ್ರಾಮಸ್ಥರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ. ತಾಲ್ಲೂಕಿನಲ್ಲಿ ಅಂದಾಜು ೪೦೦ ಹೆಕ್ಟೇರ್ ತೋಟಗಾರಿಕೆ ಮತ್ತು ೮೦ ಸಾವಿರ ಹೆಕ್ಟೇರ್ ಕೃಷಿ ಬೆಳೆಗಳು ಹಾನಿಯಾಗಿವೆ. ೮೦೦ಕ್ಕೂ ಅಧಿಕ ಮನೆಗಳು ಕುಸಿದಿವೆ ತಕ್ಷಣ ಸರಕಾರ ಇವೆಲ್ಲ ಸಮಸ್ಯೆಗಳನ್ನು ಪರಿಹರಿಸಬೇಕೆಂದು ವೆಲ್ಫೇರ್ ಪಾರ್ಟಿ ಒತ್ತಾಯಿಸಿದೆ.
ಪ್ರವಾಹ ಪೀಡಿತ ಸಂತ್ರಸ್ತರಿಗೆ ವೆಲ್ಫೇರ್ ಪಾರ್ಟಿಯಿಂದ ಆಹಾರ ಧಾನ್ಯ ಕಿಟ್ ವಿತರಣೆ ವೆಲ್ಫೇರ್ ಪಾರ್ಟಿ ರಾಜ್ಯಾಧ್ಯಕ್ಷರು ಮಾಡಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಮಾಧ್ಯಮ ಕಾರ್ಯದರ್ಶಿ ಅಜೀಜ್ ಜಾಗಿರ್ದಾರ್, ವೆಲ್ಫೇರ್ ಪಾರ್ಟಿ ಆಫ್ ಇಂಡಿಯನ್ ಜಿಲ್ಲಾಧ್ಯಕ್ಷ ಸಲೀಂ ಅಹ್ಮದ್ ಚಿತಾಪುರ, ಜೇವರ್ಗಿ ಪಕ್ಷದ ಮುಖಂಡರಾದ ಅಜೀಜ್ ಪಟೇಲ್, ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.