ಕಲಬುರಗಿ: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಇದೇ ಜೂನ್ 21 ರಂದು ಯಾದಗಿರಿ ಜಿಲ್ಲೆಯ ಗುರುಮಠಕಲ್, ಜೂನ್ 22 ರಂದು ಕಲಬುರಗಿ ಜಿಲ್ಲೆಯ ಅಫಜಲ್ ಪುರ, ಜೂನ್ 28 ರಂದು ರಾಯಚೂರು ಜಿಲ್ಲೆಯ ಸಿಂಧನೂರು ಹಾಗೂ ಜೂನ್ 29 ರಂದು ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕುಗಳಲ್ಲಿ ಗ್ರಾಮವಾಸ್ತವ್ಯ ಹೂಡಲು ನಿರ್ಧರಿಸಿರುತ್ತಾರೆ.
ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಜಿಲ್ಲಾ ಉಸ್ತುವಾರಿ ಸಚಿವರುಗಳೊಂದಿಗೆ ಶುಕ್ರವಾರ 7 ರಂದು ಸಂಜೆ 5.30 ಗಂಟೆಗೆ ಪೂರ್ವಭಾವಿ ಸಭೆ ನಡೆಸಿ ಗ್ರಾಮವಾಸ್ತವ್ಯದ ಕುರಿತು ಚರ್ಚಿಸಲಿದ್ದಾರೆ.
ಹಾಗಾಗಿ ಕಲಬುರಗಿ ಜಿಲ್ಲಾ ಹಾಗೂ ಸಮಾಜಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿಗಳೊಂದಿಗೆ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸುತಿದ್ದು, ಸಮಾಜಕಲ್ಯಾಣ ಸಚಿವರ ನಿಗದಿತ ನಾಳೆಯ ಅಂದರೆ 7 ಕಲಬುರಗಿ ಜಿಲ್ಲಾ ಪ್ರವಾಸ ಮುಂದೂಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.