ಕಲಬುರಗಿ: ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ರಾಜ್ಯೋತ್ಸವ ಕಾರ್ಯಕ್ರಮವನ್ನು ಬಹಿಷ್ಕರಿಸಿ, ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ, ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿಯಿಂದ ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಯತ್ನಿಸಲಾಯಿತು.
ಈ ವೇಳೆ ಹತ್ತಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಇಂದು ಬೆಳಿಗೆ ನಡೆದಿದೆ.
ರಾಜ್ಯ ಸರಕಾರದಿಂದ ಪದೇ ಪದೇ ಈ ಭಾಗಕ್ಕೆ ಅನ್ಯಾಯವಾಗುತ್ತಿದೆ, ಕಲ್ಯಾಣ ಕರ್ನಾಟಕ ಭಾಗಕ್ಕೆ ಮಲತಾಯಿ ಧೋರಣೆ ಮುಂದುವರಿಸಲಾಗುತ್ತಿದೆ ಎಂದು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದರು.
ಸಚಿವ ಸ್ಥಾನದಿಂದಲೂ ಈ ಭಾಗವನ್ನ ವಂಚಿಸಲಾಗಿದ್ದು, ಸಂವಿಧಾನದ ಕಲಂ 371ಕ್ಕೆ ತಿದ್ದುಪಡಿ ತಾದರು ಯಾವುದೇ ಪ್ರಯೋಜನವಿಲ್ಲ. ಅನ್ಯಾಯದ ಮೇಲೆ ಅನ್ಯಾಯ ಮಾಡಲಾಗುತ್ತಿದೆ ಎಂದರು.