ಕೇಂದ್ರ ಕಾರಾಗೃಹದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

0
52

ಕಲಬುರಗಿ: 65ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಅಂಗವಾಗಿ ರವಿವಾರ ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಕೇಂದ್ರ ಕಾರಾಗೃಹದ ಪ್ರಭಾರಿ ಅಧೀಕ್ಷಕರಾದ ವಿ. ಕೃಷ್ಣಮೂರ್ತಿ ಅವರು ನಾಡ ದೇವತೆ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಧ್ವಜಾರೋಹಣ ನೆರವೇರಿಸಿದರು.

ನಂತರ ಅವರು ಮಾತನಾಡಿ, ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಬೇಕು. ನಮ್ಮ ಕನ್ನಡ ಭಾಷೆಗೆ ಹೆಚ್ಚಿನ ಒತ್ತು ಕೊಟ್ಟು, ಆಡಳಿತದಲ್ಲಿ ಕನ್ನಡ ಭಾಷೆಯನ್ನು ಪಾರದರ್ಶಕವಾಗಿ ಬಳಸಬೇಕು ಹೇಳಿದರು.

Contact Your\'s Advertisement; 9902492681

ರಾಜ್ಯೋತ್ಸವ ಅಂಗವಾಗಿ ಕಾರಾಗೃಹದ ಬಂದಿಗಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು. ಕಾರಾಗೃಹದ ವೈದ್ಯಾಧಿಕಾರಿಗಳಾದ ಡಾ. ಅಣ್ಣಾರಾವ ಪಾಟೀಲ್, ಜೈಲರ್‍ಗಳಾದ ಸೈನಾಜೆ ಎಂ. ನಿಗೇವಾನ್, ಗೋಪಾಲಕೃಷ್ಣ ಕುಲಕರ್ಣಿ, ಅರ್ಜುನ್ ಸಿಂಗ್ ಚವ್ಹಾಣ, ಸೇರಿದಂತೆ ಕಾರಾಗೃಹದ ಅಧಿಕಾರಿ, ಸಿಬ್ಬಂದಿಗಳು ಹಾಗೂ ಬಂದಿಗಳು ಪಾಲ್ಗೊಂಡಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here