ಮಾಲೂರು: ತಾಲ್ಲೂಕಿನ ಕಸಬಾ ಹೋಬಳಿಯ ತೊರ‍್ನಹಳ್ಳಿ ಗ್ರಾಮದಲ್ಲಿ ಶ್ರೀ ವಾಲ್ಮೀಕಿ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ವಾಲ್ಮೀಕಿ ಜಯಂತಿ ಪ್ರಯುಕ್ತ ಊರಿನಲ್ಲಿ 8 ದೇವರುಗಳ ಮೆರವಣಿಗೆಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ತೊರ‍್ನಹಳ್ಳಿ ಗ್ರಾಮದಲ್ಲಿ ಗ್ರಾಮದೇವತೆಯಾದ ಸಪ್ಪಲಮ್ಮ, ದೊಡ್ಡಮ್ಮ, ಶ್ರೀ ವಾಲ್ಮೀಕಿ ಬೆಳ್ಳಿ ವಿಗ್ರಹ, ಶ್ರೀ ಭೀಮೇಶ್ವರಸ್ವಾಮಿ, ಸುಗ್ಗಲಮ್ಮ , ಗಂಗಮ್ಮ, ಶ್ರೀ ದ್ರೌಪದಮ್ಮ ಹಾಗೂ ಶ್ರೀ ಮುನೇಶ್ವರಸ್ವಾಮಿ ದೇವರ ಪಲ್ಲಕ್ಕಿಗಳ ಮೆರವಣಿಗೆ ಅದ್ದೂರಿಯಾಗಿ ನಡೆಯಿತು.
ಪ್ರತಿವರ್ಷದಂತೆ ಈ ವರ್ಷವು ದೇಶಾದ್ಯಂತ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಹಮ್ಮಿಕೊಳ್ಳಲಾಗಿತ್ತು. ಆದ್ದರಿಂದ ತೊರ‍್ನಹಳ್ಳಿ ಗ್ರಾಮದಲ್ಲೂ ಸಹ ಶ್ರೀ ವಾಲ್ಮೀಕಿ ಮಹರ್ಷಿಗಳ ಬೆಳ್ಳಿ ಪಲ್ಲಕ್ಕಿಯನ್ನು ಊರಿನಲ್ಲಿ ಮೆರವಣಿಗೆ ಮಾಡುವ ಮೂಲಕ ನಮನಗಳನ್ನು ಸಲ್ಲಿಸಲಾಯಿತು.
ಈ ಕಾರ್ಯಕ್ರಮದಲ್ಲಿ ತೊರ‍್ನಹಳ್ಳಿ ಗ್ರಾಮದ ಶ್ರೀ ವಾಲ್ಮೀಕಿ ಕ್ಷೇಮಾಭಿವೃದ್ಧಿ ಸಂಘದ ಎಲ್ಲಾ ಪದಾಧಿಕಾರಿಗಳು ಹಾಗೂ ಊರಿನ ಎಲ್ಲಾ ಮುಖಂಡರು ಉಪಸ್ಥಿತರಿದ್ದರು.