ಶಹಾಬಾದ:ಕೇಂದ್ರ ಸರಕಾರ ತನ್ನ ಸಾಮಾಜಿಕ ಕಲ್ಯಾಣದ ಯೋಜನೆಯಡಿ ಜಾರಿಗೆ ತಂದಿರುವ ಸುಕನ್ಯಾ ಸಮೃದ್ಧಿ ಯೋಜನೆಯು ನಿಜಕ್ಕೂ ಹೆಣ್ಣು ಮಕ್ಕಳ ಉಜ್ವಲ ಭವಿಷ್ಯಕ್ಕೆ ಆಶಾಕಿರಣ ಎಂದು ಬಿಜೆಪಿ ಮುಖಂಡೆ ಜಯಶ್ರೀ ಬಸವರಾಜ ಮತ್ತಿಮಡು ಹೇಳಿದರು.
ಅವರು ನಗರದ ಜೆಪಿ ಕಾಲೋನಿಯಲ್ಲಿ ಬಿಜೆಪಿ ಮಹಿಳಾ ಮೋಚರ್ಾದ ವತಿಯಿಂದ ಆಯೋಜಿಸಲಾದ ಸುಕನ್ಯಾ ಸಮೃದ್ಧಿ ಯೋಜನೆಯ ಜಾಗೃತಿ ಶಿಬಿರದಲ್ಲಿ ಮಾತನಾಡಿದರು.
ಹೆಣ್ಣು ಮಗುವಿನ ಉನ್ನತ ಶಿಕ್ಷಣಕ್ಕೆ,ವಿವಾಹ,ಮನೆ ಖರೀದಿ, ಬಂಗಾರ ಒಡವೆ ಮುಂತಾದ ಅರ್ಥಪೂರ್ಣ ಕಾರ್ಯಗಳಿಗೆ ಸುಕನ್ಯಾ ಸಮೃದ್ಧಿ ಯೋಜನೆ ಲಾಭದಾಯಕ.ಅದಕ್ಕಾಗಿ ತಮ್ಮ ಹೆಣ್ಣು ಮಕ್ಕಳ ಹೆಸರಿನಲ್ಲಿ ಖಾತೆ ತೆರೆದು ಈ ಯೋಜನೆಯ ಲಾಭ ಪಡೆಯಿರಿ ಎಂದು ಹೇಳಿದರು.
ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಭಾಗಿರಥಿ ಗುನ್ನಾಪೂರ ಮಾತನಾಡಿ, ದೇಶದ ಹೆಣ್ಣು ಮಕ್ಕಳ ಭವಿಷ್ಯವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಆರಂಭಿಸಿದ ಸುಕನ್ಯಾ ಸಮೃದ್ಧಿ ಯೋಜನೆ ನಿಜಕ್ಕೂ ಹೆಣ್ಣು ಮಕ್ಕಳು ಸ್ವಾಭಿಮಾನದಿಂದ ಬದುಕಲು ಸಾಧ್ಯವಾಗುತ್ತದೆ.ಪ್ರಧಾನಿ ಮೋದಿಯವರು ಬೇಟಿ ಬಚಾವೊ, ಬೇಟಿ ಪಡಾವೊ ಅಭಿಯಾನದಡಿ ಈ ಯೋಜನೆಯನ್ನು ಪ್ರಾರಂಭಿಸಿ ಇಡೀ ಹೆಣ್ಣು ಮಕ್ಕಳ ಭವಿಷ್ಯಕ್ಕೆ ದಾರಿದೀಪವಾಗಿದ್ದಾರೆ.ಈ ಯೋಜನೆ ಹೆಣ್ಣು ಮಕ್ಕಳಿಗೆ ಮಾತ್ರ ಅನ್ವಯಿಸುತ್ತದೆ.ಖಾತೆ ತೆರೆಯುವ ಸಮಯದಲ್ಲಿ ಹೆಣ್ಣು ಮಗುವಿಗೆ 10 ವರ್ಷಕ್ಕಿಂತ ಕಡಿಮೆ ಇರಬೇಕು.ಇದು ಸಣ್ಣ ಠೇವಣಿ ಯೋಜನೆಯಾಗಿದ್ದು, ಹೆಣ್ಣು ಮಗುವಿನ ಶಿಕ್ಷಣ ಮತ್ತು ವಿವಾಹ ವೆಚ್ಛಗಳನ್ನು ಪೂರೈಸುತ್ತದೆ ಎಂದರು.
ಮಹಿಳಾ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಜ್ಯೋತಿ ಶಮರ್ಾ ಮಾತನಾಡಿದರು. ಮಹಿಳಾ ಘಟಕದ ತಾಲೂಕಾಧ್ಯಕ್ಷೆ ಜಯಶ್ರೀ ಸೂಡಿ, ನಿವೃತ್ತ ಶಿಕ್ಷಕಿ ಕಮಲಾಬಾಯಿ ಕಂಬಾನೂರ, ನಗರಸಭೆ ಸದಸ್ಯ ರವಿ ರಾಠೋಡ, ಸರಸ್ವತಿ ಅಶೋಕ, ಸುಜಾತಾ, ಶಿಲ್ಪಾ ಸೇರಿದಂತೆ ಇತರರು ಇದ್ದರು.