ಕಲಬುರಗಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2020-21 ಸಾಲಿನ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರ ಹಾಗೂ ಮೆರಿಟ್ ಕಂ ಮೀನ್ಸ್ ಆನ್ ಲೈನ್ ಸ್ಕಾಲರ್ಶಿಪ್ ಅರ್ಜಿಯನ್ನು ಜಿಲ್ಲೆಯ ಒಟ್ಟು 29 ಕೇಂದ್ರಗಳಲ್ಲಿ ಉಚಿತವಾಗಿ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದ್ದು, ಈ ಕುರಿತು ವಿದ್ಯಾರ್ಥಿಗಳು ಅದರ ಸದೂಪಯೋಗ ಪಡಿಸಿಕೊಳ್ಳಬೇಕೆಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳಾದ ಮೆಹಬೂಬ್. ಎಸ್ ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದಂತೆ ಅನ್ ಲೈನ ಮೂಲಕ ಸ್ವೀಕೃತವಾಗುತ್ತಿರುವ ಅರ್ಜಿಗಳ ಸಂಖ್ಯೆ ನಿರೀಕ್ಷೆಗಿಂತ ಕಡಿಮೆ ಇರುವುದರಿ೦ದ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾಹಿತಿ ಕೇ೦ದ್ರ .ದೇ.ವ.ಶಾಲೆ/ಕಾಲೇಜು ಮತ್ತು ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ವಿದ್ಯಾರ್ಥಿ ವೇತನದ ಅರ್ಜಿಗಳನ್ನು ಉಚಿತವಾಗಿ ಹಾಕಲು ಅನುಕೂಲ ಮಾಡಿದೆ.
ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸದೂಪಯೋಗವಾಗಬೇಕೆನ್ನುವ ಉದ್ದೇಶದಿಂದ ಎಲ್ಲ ತಾಲೂಕುಗಳಲ್ಲಿ ಉಚಿತವಾಗಿ ಅರ್ಜಿ ಸಲ್ಲಿಸಲು ಆನ್ ಲೈನ್ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಈ ಕುರಿತು ಆಯಾ ತಾಲೂಕವಾರು ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಮಾಹಿತಿಗಾಗಿ ಅವರನ್ನು ಸಂಪರ್ಕಿಸಿ ಈ ಸೌಲಭ್ಯವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದ್ದಾರೆ.
ಆಳಂದ ತಾಲೂಕಿನ ಮಚೇಂದ್ರ 9449785047, ಅಫಜಲಪೂರ್ ಹಾಗೂ ಕಲಬುರಗಿ ತಾಲೂಕಿಗೆ ವಾಜಿದ್ ಮೂಬಿನ್ 7899755427, ಚಿಂಚೋಳಿ ತಾಲೂಕಿನ ಶಾಂತವೀರಯ್ಯ 9845848048, ಚಿತ್ತಾಪೂರ ತಾಲೂಕಿಗೆ ತೇಜರಾಜ್ 9741168681,ಜೇವರ್ಗಿ ತಾಲೂಕಿನ ಶಕುಂತಲಾ 9535775141 ಹಾಗೂ ಸೇಡಂ ತಾಲೂಕಿಗೆ ವಿಜಯಲಕ್ಷ್ಮಿ 7760680162 ಅವರನ್ನು ಸಂಪರ್ಕಿಸಲು ಕೋರಿದ್ದಾರೆ.
ಕಾರ್ಯನಿರ್ವಹಿಸುವ ಕೇಂದ್ರಗಳ ವಿಳಾಸ ಹಾಗೂ ದೂರವಾಣಿ ಸಂಖ್ಯೆ⇓