ಕಲಬುರಗಿ: ರಾಜಕೀಯ ದುರಾಡಳಿತದಿಂದ ಬೇಸತ್ತು ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದ ಸಸಿಕಾಂತ್ ಸೆಂಥಿಲ್ ಕಾಂಗ್ರೆಸ್ ಸೇರ್ಪಡೆಗೊಳ್ಳುತ್ತಿರುವುದು ಕುತುಹಲ ಮೂಡಿಸಿದೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಮಾಜಿ ಐಎಎಸ್ ಅಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ನಾಳೆ ತಮಿಳುನಾಡಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಲಬುರಗಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳಾಗಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ್ದರೆಂದು, ಆ ಭಾಗದ ಜನತೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಹಾಗೂ ಐಎಎಸ್ ಹುದ್ದೆಗೆ ರಾಜೀನಾಮೆ ಕೊಡಬಾರದೆಂದು ಜನತೆ ಒತ್ತಾಯಿಸಿದ್ದರು.
ಐಎಎಸ್ ಹುದ್ದೆಗೆ ರಾಜೀನಾಮೆ ಕೊಟ್ಟ ನಂತರ ಸಸಿಕಾಂತ್ ಸೆಂಥಿಲ್, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಸರಕಾರದ ಜಾರಿಗೆ ತರಲು ಉದ್ದೇಶಿಸಿರುವ ಎನ್ ಆರ್ ಸಿ, ಸಿಎಎ ಕಾಯ್ದೆಗಳ ವಿರುದ್ದ ಜನಜಾಗೃತಿ ಮೂಡಿಸುವಲ್ಲಿ ತೊಡಗಿಸಿಕೊಂಡಿದ್ದರು.
ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದ ಅಣ್ಣಾ ಮಲೈ ಇತ್ತೀಚೆಗಷ್ಟೆ ತಮಿಳುನಾಡಿನಲ್ಲಿ ಬಿಜೆಪಿ ಸೇರ್ಪಡೆಗೊಂಡಿದ್ದರು.
ಈಗ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಕಾಂಗ್ರೆಸ್ ಸೇರಿರುವುದು ತಮಿಳುನಾಡಿನ ರಾಜಕಾರಣದಲ್ಲಿ ರಾಷ್ಟ್ರೀಯ ಪಕ್ಷಗಳು ತನ್ನ ಪ್ರಭಾವವನ್ನು ಹವಣಿಸುತ್ತಿವೆಯೇ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿವೆ.