’ಶಿಕ್ಷಣ ಕ್ಷೇತ್ರಕ್ಕೆ ಡಾ.ಅಪ್ಪಾಜೀ ನೀಡಿದ ಕೊಡುಗೆ’ ಕುರಿತು ವಿಚಾರ ಸಂಕಿರಣ (ವೆಬ್‌ನಾರ್)

0
58

ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾ, ಪೂಜ್ಯ ಮಾತೋಶ್ರೀ ಡಾ. ದಾಕ್ಷಾಯಿಣಿ ಅವ್ವಾಜಿ ಹಾಗೂ ಪೂಜ್ಯ ಚಿ. ದೊಡ್ಡಪ್ಪ ಅಪ್ಪಾರವರ ಜನ್ಮದಿನದ ಪ್ರಯುಕ್ತ ರಾಷ್ಟ್ರೀಯ ಶಿಕ್ಷಣ ನೀತಿ ೨೦೨೦ರ ಭಾಗವಾಗಿ ಶುಕ್ರವಾರ ಬೆಳಿಗ್ಗೆ ೧೧ ಗಂಟೆಗೆ ಆಯೋಜಿಸಿದ್ದ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕೀರಣವನ್ನು (ವೆಬಿನಾರ್) ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಡಾ. ಶರಣಪ್ಪ ವಿ. ಹಲ್ಸೆ ಉದ್ಘಾಟಿಸಲಿದ್ದಾರೆ.

ವಿವಿ ಕುಲಸಚಿವ ಡಾ. ಅನೀಲಕುಮಾರ ಬಿಡವೆ, ’ಉನ್ನತ ಶಿಕ್ಷಣಕ್ಕೆ ಪೂಜ್ಯ ಡಾ.ಶರಣಬಸವಪ್ಪ ಅಪ್ಪಾ ಅವರ ಕೊಡುಗೆ, ವಿಶೇಷವಾಗಿ ಬಹು ಶಿಸ್ತಿನ ದೊಡ್ಡ ವಿಶ್ವವಿದ್ಯಾಲಯ ಸ್ಥಾಪಿಸಿದ್ದ’ ಬಗ್ಗೆ ಒಂದು ದಿನದ ವೆಬ್‌ನಾರ್ ಹಮ್ಮಿಕೊಳ್ಳಲಾಗಿದೆ. ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಶ್ರೀ ಬಸವರಾಜ ದೇಶಮುಖ ಕಾರ್ಯಕ್ರಮದ ಅತಿಥಿ ಮತ್ತುಡಾ. ಶರಣಪ್ಪ ವಿ. ಹಲ್ಸೆ ಉದ್ಘಾಟನಾ ಭಾ?ಣ ಮಾಡಲಿದ್ದಾರೆ. ಶರಣಬಸವ ವಿಶ್ವವಿದ್ಯಾಲಯದ ಕುಲಪತಿ ಡಾ. ನಿರಂಜನ ವಿ. ನಿಷ್ಠಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಬುಧವಾರ ಹೇಳಿದರು.

Contact Your\'s Advertisement; 9902492681

ಗುಲ್ಬರ್ಗಾ ವಿಶ್ವವಿದ್ಯಾಲಯದ ಸಮಾಜಕಾರ್ಯ ವಿಭಾಗದ ಪ್ರಾಧ್ಯಾಪಕ ಡಾ.ಕೆ.ಎಸ್. ಮಾಲಿಪಾಟೀಲ, ಕರ್ನಾಟಕದ ಕೇಂದ್ರೀಯ ವಿಶ್ವವಿದ್ಯಾಲಯದ ಬ್ಯುಸಿನೇಸ್ ಸ್ಟಡಿಸ್ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಗಣಪತಿ ಸಿನ್ನೋರ್, ಶರಣಬಸವ ವಿಶ್ವವಿದ್ಯಾಲಯದ ಕುಲಸಚಿವ ಡಾ. ಅನೀಲಕುಮಾರ ಬಿಡವೆ, ಮೌಲ್ಯಮಾಪನ ಕುಲಸಚಿವ ಡಾ. ಲಿಂಗರಾಜ ಶಾಸ್ತ್ರಿ ವಿಷಯದ ಕುರಿತು ಮಾತನಾಡಲಿದ್ದಾರೆ ಎಂದು ಡಾ. ಅನೀಲಕುಮಾರ ಬಿಡವೆ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here