ವಿದ್ಯುತ್ ದರ ಎರಿಕೆ ಖಂಡನೀಯ: ಹೊಸಮನಿ

0
42

ಕಲಬುರಗಿ: ವಿದ್ಯುತ್ ದರ ಹೆಚ್ಚಳ ನಿರ್ಧಾರವನ್ನು ಸರಕಾರ ಹಿಂತೆಗೆದುಕೊಳ್ಳದಂತೆ ಕನ್ನಡ ಭೂಮಿ ಜಾಗೃತಿ ಸಮಿತಿ ಒತ್ತಾಯಿಸಿದೆ.

ಕನ್ನಡ ಭೂಮಿ ಜಾಗೃತಿ ಸಮಿತಿ ಕಲ್ಯಾಣ ಕರ್ನಾಟಕ ಅಧ್ಯಕ್ಷರಾದ ಶರಣು ಹೊಸಮನಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರಲ್ಲಿ ಮನವಿ ಮಾಡಿದ ಅವರು ‘ ವಿದ್ಯುತ್ ದರವನ್ನು ಪ್ರತಿ ಯೂನಿಟ್ ಗೆ 20 ಪೈಸೆಯಿಂದ 40 ಪೈಸೆಗೆ ಹೆಚ್ಚಿಸಲು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ ಸಿ) ಅನುಮತಿ ನೀಡಿರುವುದರಿಂದ ಸಣ್ಣ ಮತ್ತು ಮಧ್ಯಮ ( ಎಂ ಎಸ್ ಎಮ್ ಐ ) ಕೈಗಾರಿಕೆಗಳು ಅಘಾತಕ್ಕೊಳಗಾಗಿವೆ.

Contact Your\'s Advertisement; 9902492681

ಕೊರೊನಾದಿಂದ ನಲುಗಿ , ಈಗ ತಾನೇ ಚೇತರಿಸಿಕೊಳ್ಳುತ್ತಿರುವ ಕೈಗಾರಿಗಳಿಗೆ ಈ ನಿರ್ಧಾರ ಮಾರಕವಾಗಲಿದೆ ಎಂದು ಕಳವಳ ವ್ಯಕ್ತಪಡಿಸಿದರು.

ವಸತಿ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಣ್ಣ ಕೈಗಾರಿಕೆಗಳ ಸ್ಥಳಾಂತರ ಕಷ್ಟಸಾಧ್ಯ. ಸದರಿ ಕೈಗಾರಿಕೆಗಳನ್ನು ಸ್ಥಳಾಂತರಿಸಲು ಅನೂಕುಲ ವಾಗುವಂತೆ ಕಲಬುರಗಿ ನಗರದ ಸುತ್ತಮುತ್ತ ಹೊಸ ಕೈಗಾರಿಕಾ ವಸಾಹತು ಸ್ಥಾಪಿಸುವ ಕುರಿತು ಸರಕಾರ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದರು.

ಕೈಗಾರಿಕಾ ನೀತಿ ಜಾರಿಗೆ ಬಂದು ಎರಡು ತಿಂಗಳು ಕಳೆದಿದ್ದರೂ , ಸಂಬಂಧಿಪಟ್ಟ ಇಲಾಖೆಗಳು ಅಧಿಸೂಚನೆ ಹೊರಡಿಸಿಲ್ಲ. ಇದರಿಂದ ಕೈಗಾರಿಕಾ ನೀತಿಯಲ್ಲಿ ಜಾರಿಗೊಳಿಸಿದ ರಿಯಾಯಿತಿ ಮತ್ತು ಪ್ರಯೋಜನಗಳನ್ನು ಕೈಗಾರಿಕೋದ್ಯಮಿಗಳು ಪಡೆಯಲು ಸಾಧ್ಯವಾಗುತ್ತಿಲ್ಲ. ಇತರೆ ಇಲಾಖೆಗಳು ತ್ವರಿತವಾಗಿ ಅಧಿಸೂಚನೆಗಳನ್ನು ಹೊರಡಿಸಬೇಕು. ಎಂದು ಒತ್ತಾಯಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here