ಶಹಾಬಾದ:ಅಂಗಲವಿಕರಿಗೆ ಮೀಸಲಿಟ್ಟ ಹಣ ಹಾಗೂ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿದ ಕಾರ್ಮಿಕರಿಗೆ ಹಣ ಸಂದಾಯ ಮಾಡಬೇಕೆಂದು ಆಗ್ರಹಿಸಿ ನವೆಂಬರ್ 21 ರಂದು ತಾಪಂ ಕಾರ್ಯಾಲಯದ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕಾ ಸಂಚಾಲಕ ರಾಯಪ್ಪ ಹುರಮುಂಜಿ ಹೇಳಿದರು.
ಅವರು ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಈಗಾಗಲೇ ಈ ವಿಷಯದ ಕುರಿತು ತಾಲೂಕಾ ಪಂಚಾಯತಿ ಕಾರ್ಯನಿವರ್ಾಹಕ ಅಧಿಕಾರಿ ಲಕ್ಷ್ಮಣ ಶೃಂಗೇರಿ ಅವರಿಗೆ ಮನವಿ ಸಲ್ಲಿಸಿದ್ದೆವೆ. ಅವರು ಕೂಡಲೇ ಸಂದಾಯ ಮಾಡಲಾಗುವುದೆಂದು ಭರವಸೆ ನೀಡಿದ್ದರು.ಆದರೆ ತಿಂಗಳುಗಳೇ ಕಳೆದರೂ ಭರವಸೆ ಮಾತ್ರ ಈಡೇರಿಲ್ಲ.
ಆದ್ದರಿಂದಹೊನಗುಂಟಾ ಗ್ರಾಪಂಯಲ್ಲಿ 2019-20ನೇ ಸಾಲಿನ 14ನೇ ಹಣಕಾಸು ಯೋಜನೆಯಡಿ ಅಂಗವಿಕಲರಿಗೆ ನೀಸಲಿಟ್ಟ 5% ಅನುದಾನವನ್ನು ಹಂಚಿಕೆ ಮಾಡಬೇಕು. ಅಲ್ಲದೇ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿದ ಫಲಾನುಭವಿಗಳಿಗೆ ತಾಂತ್ರಿಕ ದೋಷದಿಂದ ಹಣ ಸಂದಾಯವಾಗದವರಿಗೆ ಸರಿಪಡಿಸಿ ಕೂಡಲೇ ಹಣ ಸಂದಾಯ ಮಾಡಬೇಕೆಂದು ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಅಂಗವಿಕಲರ ಸಂಘದಿಂದ ಪ್ರತಿಭಟನೆ ಆಯೋಜಿಸಲಾಗಿದೆ. ಬೇಡಿಕೆ ಈಡೇರದಿದ್ದರೇ ಈ ಹೋರಾಟ ನಿರಂತರವಾಗಿ ಕೈಗೊಳ್ಳಲಾಗುತ್ತದೆ ಎಂದು ರಾಯಪ್ಪ ಎಚ್ಚರಿಕೆ ನೀಡಿದರು.