ಬಿಗ್‌ ಬ್ರೇಕಿಂಗ್: ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ & ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ರದ್ದು

0
1427

ಬೆಂಗಳೂರು: ರಾಜ್ಯದ ನಗರ ಪ್ರದೇಶ ಸ್ಥಳೀಯ ಸಂಸ್ಥೆಗಳಾದ ಪಟ್ಟಣ ಸಭೆ, ನಗರಸಭೆ, ಪುರಸಭೆಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಸರ್ಕಾರ ಹೊರಡಿಸಿದ್ದ ಮೀಸಲಾತಿ ಅಧಿಸೂಚನೆಯನ್ನು ರಾಜ್ಯ ಹೈಕೋರ್ಟ್ ಇಂದು ರದ್ದು ಮಾಡಿದೆ.

ನ್ಯಾಯಮೂರ್ತಿ ಆರ್.ದೇವದಾಸ್ ಏಕಸದಸ್ಯ ಪೀಠ ಈ ಆದೇಶ ಹೊರಡಿಸಿದ್ದು, ಪ್ರಕಟವಾಗಿರುವ ಮೀಸಲಾತಿ ಅಧಿಸೂಚನೆಯನ್ನು ರದ್ದು ಮಾಡಿ, 4 ವಾರಗಳಲ್ಲಿ ಹೊಸ ಮೀಸಲಾತಿ ನಿಗದಿ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಜತೆಗೆ ಈ ಕುರಿತು ಮೇಲ್ಮನವಿ ಸಲ್ಲಿಸಲು 10 ದಿನಗಳ ಕಾಲವಕಾಶವನ್ನು ನೀಡಿದೆ.

Contact Your\'s Advertisement; 9902492681

ಹೈಕೋರ್ಟ್ ನ ಈ ಆದೇಶ ಇತ್ತೀಚೆಗೆ ನಗರ ಪ್ರದೇಶ ಸ್ಥಳೀಯ ಸಂಸ್ಥೆಗಳಿಗೆ ಆಯ್ಕೆಯಾದವರಿಗೆ ಶಾಕ್ ನೀಡಿದ್ದು, ಕಷ್ಟಪಟ್ಟು ಗದ್ದುಗೆ ಹಿಡಿದವರಿಗೆ ನುಂಗಲಾರದ ತುತ್ತಾಗಿದೆ. ಸದ್ಯ ಹೈಕೋರ್ಟ್ ನಲ್ಲಿ ಈ ವಿಚಾರವಾಗಿ ಮುಂದಿನ ವಿಚಾರಣೆ ನಡೆದು ಆದೇಶ ಹೊರಬೀಳುವವರೆಗೂ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳು ಅಮಾನತ್ತಿನಲ್ಲಿ ಇರಲಿವೆ.

ಕಳೆದ ಅಕ್ಟೋಬರ್ 8ರಂದು ರಾಜ್ಯದ ಒಟ್ಟು 277 ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಸರ್ಕಾರ ಮೀಸಲಾತಿ ಪಟ್ಟಿ ಪ್ರಕಟಿಸಿತ್ತು. ಇದರಿಂದಾಗಿ ಚುನಾವಣೆ ನಡೆದಿದ್ದರೂ 2 ವರ್ಷಗಳಿಗೂ ಹೆಚ್ಚು ಕಾಲ ಚುನಾಯಿತ ಆಡಳಿತ ಮಂಡಳಿ ಇಲ್ಲದೇ ಸಮಸ್ಯೆ ಎದುರಿಸುತ್ತಿದ್ದ ಸ್ಥಳೀಯ ಸಂಸ್ಥೆಗಳಿಗೆ ಜೀವ ಬಂದಂತಾಗಿತ್ತು. ಆದರೆ ಸರ್ಕಾರ ನಗರ ಸ್ಥಳೀಯ ಸಂಸ್ಥೆಗಳಿಗೆ ನಿಗಧಿ ಮಾಡಿದ್ದ ಮೀಸಲಾತಿ ಬಗ್ಗೆ ಅಪಸ್ವರಗಳು ಕೇಳಿಬಂದಿತ್ತು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here