ಬೆಂಗಳೂರು: ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಶಶೀಲ್ ನಮೋಶಿ ಅವರು ಇಂದು ವಿಧಾನಸೌಧದಲ್ಲಿ ಸಭಾಪತಿಗಳಾದ ಪ್ರತಾಪಚಂದ್ರ ಶೆಟ್ಟಿ ಅವರಿಂದ ವಿಧಾನಪರಿಷತ್ ಸದಸ್ಯರಾಗಿ ಪ್ರಮಾಣ ಪ್ರಚನ ಸ್ವೀಕರಿಸಿದರು.
ಶೈಕ್ಷಣಿಕ ಅಭಿವೃದ್ಧಿ, ಶಿಕ್ಷಕರ ಏಳಿಗೆಗೆ ಶ್ರಮಿಸಲು ಮತ್ತೊಮ್ಮೆ ಅವಕಾಶ ನೀಡಿದ ಮತದಾರ ಬಾಂಧವರಿಗೆ ಧನ್ಯವಾದ ಸಲ್ಲಿಸಿದ ನಮೋಶಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ ಕುಮಾರ್ ಕಟೀಲ್, ಪಕ್ಷದ ಎಲ್ಲಾ ಹಿರಿಯ ಮುಖಂಡರನ್ನು ಸ್ಮರಿಸಿದರು.
ಉತ್ತಮ ಸಮಾಜದ ಶಿಲ್ಪಿಗಳಾಗಿರುವ ಶಿಕ್ಷಕರ ಶ್ರೇಯೋಭಿವೃದ್ಧಿಗೆ ಶ್ರಮಿಸಲು ಎಂದೆಂದಿಗೂ ಶತಸಿದ್ಧನಾಗಿರುತ್ತೇನೆ ಎಂದು ಪ್ರಮಾಣ ವಚನ ಸ್ವೀಕರಿಸಿದರು.
ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಭೇಟಿ ನೀಡಿ ಆಶೀರ್ವಾದ ಪಡೆದರು.