ಕಲಬುರಗಿ: ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಂಶೋಧನಾ ವಿದ್ಯಾರ್ಥಿನಿಯಾದ ಡಾ. ಸುನಿತಾ ಬಿ ಪಾಟೀಲ್ ಅವರಿಗೆ ಗುಲ್ಬರ್ಗಾ ವಿಶ್ವವಿದ್ಯಾಲಯದ 38ನೇ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಪಿಎಚ್ ಡಿ ಪದವಿ ಪ್ರದಾನ ಮಾಡಲಾಯಿತು
‘ಹೈದ್ರಾಬಾದ್-ಕರ್ನಾಟಕ ಭಾಗದ ಮಕ್ಕಳಲ್ಲಿ ಅಪೌಷ್ಟಿಕತೆ ತಡೆಗಟ್ಟುವಲ್ಲಿ ಮಾಧ್ಯಮಗಳ ಪಾತ್ರ’ಎಂಬ ವಿಷಯದ ಮೇಲೆ ಮಂಡಿಸಿದ ಮಹಾಪ್ರಬಂಧಕ್ಕೆ ಪಿಎಚ್ ಡಿ ಪ್ರದಾನ ಮಾಡಲಾಗಿದೆ.
ಪತ್ರಿಕೋದ್ಯಮ ವಿಭಾಗದಲ್ಲಿ ಪಿಎಚ್ ಡಿ ಪದವಿ ಪಡೆದ ಮೊದಲ ಮಹಿಳೆಯಾಗಿದ್ದಾರೆ. ಡಾ. ವಿ.ಟಿ ಕಾಂಬ್ಳೆ ಮಾರ್ಗದರ್ಶಕರು ಹಾಗೂ ಸಿ.ಕೆ.ಪುಟ್ಟಸ್ವಾಮಿ ಸಹ ಮಾರ್ಗದರ್ಶಕರಾಗಿದ್ದರು.