ಬೆಂಗಳೂರು: ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆಗೆ ಆದೇಶಸಿರುವ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ಇಂದು ಸನ್ಮಾನಿಸಲಾಯಿತು.
ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಈಶ್ವರ ಖಂಡ್ರೆ ಹಾಗೂ ಕಲಬುರಗಿ ಜಿಲ್ಲಾ ಘಟಕದ ಅಧ್ಯಕ್ಷರಾದ ಶರಣಕುಮಾರ ಮೋದಿಯವರು ಹೂಮಾಲೆ ಹಾಕಿ ಶಾಲು ಹೊದಿಸಿ ಸನ್ಮಾನಿಸಿದರು.