ವೈದ್ಯಕೀಯ ಪರೀಕ್ಷೆ ಮುಂದೂಡಲು ಆಗ್ರಹಿಸಿ ವೈದ್ಯಕೀಯ ವಿದ್ಯಾರ್ಥಿಗಳಿಂದ ಪ್ರತಿಭಟನೆ

0
55

ಕಲಬುರಗಿ: ವೈದ್ಯಕೀಯ ಶಿಕ್ಷಣ ಸಚಿವರು ಡಿಸೆಂಬರ್ ೧ ರಿಂದ ವೈದ್ಯಕೀಯ ಕಾಲೇಜುಗಳನ್ನು ಆರಂಭಿಸುವುದಾಗಿ ಹೇಳಿಕೆ ನೀಡಿದ್ದರು. ಕಳೆದ ೮ ತಿಂಗಳಿನಿಂದಲೂ ದೇಶದೆಲ್ಲೆಡೆ ಜನಸಾಮಾನ್ಯರು, ವಿದ್ಯಾರ್ಥಿಗಳು ಕೊರೋನ ಸಾಂಕ್ರಾಮಿಕಕ್ಕೆ ತುತ್ತಾಗಿ, ಆರ್ಥಿಕವಾಗಿ ನಲುಗಿ ಹೋಗಿರುವ ಸಂದರ್ಭದಲ್ಲಿ ವೈದ್ಯಕೀಯ ಪರೀಕ್ಷೆ ನಡೆಸುತ್ತಿರುವುದನ್ನು ವಿರೋಧಿಸಿ ಎಐಡಿಎಸ್ಓ ಹಾಗೂ ವೈದ್ಯಕೀಯ ವಿದ್ಯಾರ್ಥಿಗಳು ಪ್ರತಿಭಟನೆ ಆಗ್ರಹಿಸಿದ್ದಾರೆ.

ಈ ಕುರಿತು ರಾಜ್ಯದ್ಯಂತ ವಿರೋಧ ವ್ಯಕ್ತಪಡಿಸಿ ಕೆಲವು ಕಾಲೇಜುಗಳಲ್ಲಿ ಡೀನ್ ಹಾಗೂ ಪ್ರಾಂಶುಪಾಲರನ್ನು ಭೇಟಿ ಮಾಡಿ ಮನವಿ ಪತ್ರವನ್ನು ನೀಡಲಾಯಿತು. ಅಂತೆಯೇ, ಬೇಡಿಕೆಗಳ ಫಲಕವನ್ನು ಹಿಡಿದು ವಿದ್ಯಾರ್ಥಿಗಳು ತಮ್ಮ ಮನೆಯಿಂದಲೇ ಆನ್ ಲೈನ್ ಚಳುವಳಿಯಲ್ಲಿ ಭಾಗವಹಿಸಿದರು. ಈ ಹೋರಾಟಕ್ಕೆ ಪೋಷಕರು ಬೆಂಬಲ ವ್ಯಕ್ತಪಡಿಸಿದರು.

Contact Your\'s Advertisement; 9902492681

ಈ ಕೂಡಲೇ, ತನ್ನ ನಿರ್ಧಾರವನ್ನು ಹಿಂಪಡೆದು, ಪರೀಕ್ಷೆಯನ್ನು ಮುಂದೂಡಬೇಕೆಂದು ನಗರದ ಜಿಲ್ಲಾಧಿಕಾರಿ ಕಛೇರಿ ಎದರುಗಡೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳು ಮೂಲಕ ಆಗ್ರಹಿಸಿದರು.

ಈ ಪ್ರತಿಭಟನೆಯಲ್ಲಿ ಜಿಲ್ಲಾಧಕ್ಷರಾದ ಹಣಮಂತ ಎಸ್.ಎಚ್, ಜಿಲ್ಲಾ ಕಾರ್ಯದರ್ಶಿ ಈರಣ್ಣ ಇಸಬಾ , ಜಿಲ್ಲಾ ಉಪಾಧ್ಯಕ್ಷರಾದ ಸ್ನೇಹಾ ಕಟ್ಟಿಮನಿ, ವೈದ್ಯಕೀಯ ವಿದ್ಯಾರ್ಥಿಗಳಾದ ವಿಶಾಲ ದೊಡ್ಡಮನಿ, ಸುಕ್ಷತಾ, ಸಾಯಿಕುಮಾರ ಗೌಡ,ಆಕಾಶ ಪಾಟಿಲ್ ಸದಸ್ಯರಾದ ವೆಂಕಟೇಶ ದೇವದುರ್ಗ, ಭಿಮು ಆಂದೋಲ,ನಾಗರಾಜ ಸೇರಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here