ಕಲಬುರಗಿ: ಎಸ್ಟಿ ಪ್ರಮಾಣ ಪತ್ರ ನೀಡೋದಾಗಿ ಡಿಸಿ ಭರವಸೆ ನೀಡುವಂತೆ ಪಟ್ಟು ಹಿಡಿದು ಪ್ರತಿಭಟನಾ ನಿರತ ವ್ಯಕ್ತಿಯೊಬ್ಬ ಮರಕ್ಕೆ ಹಗ್ಗ ಹಾಕಿ ನೇಣು ಬೀಗಿದುಕೊಳ್ಳಲು ಯತ್ನಿಸಿರುವ ಘಟನೆ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಗಡೆ ಇಂದು ನಡೆದಿದೆ.
ವಿಕಲಚೇತನ ನಾಗಪ್ಪ ತಳವಾರ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ, ಇಂದು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ತಳವಾರ ಸಮುದಾಯಕ್ಕೆ ಎಸ್ಟಿ ಪ್ರಮಾಣ ಪತ್ರ ನೀಡುವಂತೆ ಆಗ್ರಹಿಸಿ ನೂರಾರು ಪ್ರತಿಭಟನಾಕಾರರು ಪ್ರತಿಭಟನೆ ನಡೆಸುತ್ತಿದರು. ಕೇಂದ್ರ ಸರಕಾರ ತಳವಾರ ಪರಿವಾರಕ್ಕೆ ಎಸ್.ಟಿ ಪ್ರಮಾಣ ಪತ್ರ ನೀಡಬೇಕೆಂದು ಆದೇಶಿದ್ದು, ರಾಜ್ಯ ಸರಕಾರ ಸಮುದಾಯವನ್ನು ಸಂಪೂರ್ಣವಾಗಿ ನಿರ್ಲಕ್ಷ್ಯಸುತ್ತಿದೆ ಎಂದು ಆರೋಪಿಸಿದರು.
ಈ ವೇಳೆಯಲ್ಲಿ ತಾಳಮೇ ಕಳೆದುಕೊಂಡ ನಾಗಪ್ಪ ತಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಇರುವ ಮರಕ್ಕೆ ಹಗ್ಗ ಹಾಕಿ ಆತ್ಮಹತ್ಯೆಗೆ ಯತ್ನಿಸಿದರು. ತಕ್ಷಣ ಸ್ಥಳದಲ್ಲಿದ್ದ ಪೊಲೀಸರು ಹಗ್ಗ ಕಸಿದುಕೊಂಡು ನಂತರ ನಾಗಪ್ಪನನ್ನು ಮರದಿಂದ ಕೆಳಗಿಳಿಸಿ ರಕ್ಷಣೆ ಮಾಡಿದ್ದಾರೆ. ಎಸ್ಟಿ ಪ್ರಮಾಣ ಪತ್ರ ನೀಡಲು ಏಕೆ ವಿಳಂಬ ಮಾಡಲಾಗುತ್ತಿದೆ ಎಂದು ನಾಗಪ್ಪ ಆಕ್ರೋಶ ವ್ಯಕ್ತ ಪಡಿಸಿದರು. ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಬಾರದ ಕಾರಣ ಆಕ್ರೋಶಗೊಂಡ ಪ್ರತಿಭಟನಾಕಾರು ಡಿಸಿ ಕಚೇರಿ ಎದುರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
ಈ ವೇಳೆಯಲ್ಲಿ ಹೋರಾಟಗಾರರು ಜಿಲ್ಲಾಡಳಿತ ಹಾಗೂ ಪೊಲೀಸರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.