ರಾಜ್ಯ ಸರ್ಕಾರ ದಿವಾಳಿಯಾಗಿದೆ: ಮಾಜಿ ಸಿಎಂ ಕಿಡಿ

0
43

ಬೆಂಗಳೂರು: ವೃದ್ಧಾಪ್ಯ ವೇತನ, ವಿಧವಾ ವೇತನ ನೀಡಲು ಸರ್ಕಾರದ ಬಳಿ ಹಣವಿಲ್ಲ. ರಾಜ್ಯ ಸರ್ಕಾರ ದಿವಾಳಿಯಾಗಿದೆ. ಇಂತಹ ಆರ್ಥಿಕ ಸಂಕಷ್ಟದ ನಡುವೆ ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಿಸಿ ಸರ್ಕಾರ ಇನ್ನಷ್ಟು ದುಂದುವೆಚ್ಚಕ್ಕೆ ಎಡೆಮಾಡಿಕೊಟ್ಟಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕಿಡಿಕಾರಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪನವರ ಅಧಿಕಾರ ಉಳಿಸಿಕೊಳ್ಳಲು ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಿಸಿ  ಸರ್ಕಸ್ಸಲ್ಲದೆ ಬೇರೇನಲ್ಲ ಎಂದರು.

Contact Your\'s Advertisement; 9902492681

ಕೊರೊನಾದಿಂದ ಜನ ಬದುಕು ಸಾಗಿಸುವುದೇ ಕಷ್ಟವೆನ್ನುವ ಪರಿಸ್ಥಿತಿ ಇರುವಾಗ ಶುಲ್ಕ ಪಾವತಿಸಿಲ್ಲ ಎಂಬ ಕಾರಣಕ್ಕೆ ಖಾಸಗಿ ಶಿಕ್ಷಣ ಸಂಸ್ಥೆಗಳು ಆನ್‌ಲೈನ್ ಶಿಕ್ಷಣವನ್ನು ಕೈಬಿಡಲು ಹೊರಟಿರುವುದು ಅಮಾನವೀಯ. ಇದು ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆ, ಸರ್ಕಾರ ಈ ಕೂಡಲೇ ಎಚ್ಚೆತ್ತುಕೊಂಡು ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ಸಂದರ್ಭಲ್ಲಿ ಮಾಜಿ ಸಚಿವ ಜಮೀರ್ ಅಹ್ಮದ್ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here