ಕಲಬುರಗಿ: ಮರಾಠ ಅಭಿವೃದ್ಧಿ ನಿಗಮ ರಚಿಸಿರುವ ಸರ್ಕಾರದ ನಿರ್ಧಾರ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಕರೆ ಕೊಟ್ಟಿರುವ ಕರ್ನಾಟಕ ಬಂದ್ ಹಿಂಪಡೆಯಬೇಕು ಎಂದು ಕರವೇ ( ಕನ್ನಡಿಗರ ಬಣ) ದ ಜಿಲ್ಲಾಕಾರ್ಯದ್ಯಕ್ಷರಾದ ರಮೇಶ ಪೂಜಾರಿ ಮನವಿ ಮಾಡಿದ್ದಾರೆ.
ಕರ್ನಾಟಕ ಮಹಾರಾಷ್ಟ್ರ ಗಡಿ ವಿಚಾರದಲ್ಲಿ ಮಹಾಜನ್ ವರದಿಯೇ ಅಂತಿಮ ಎಂದು ಬಲವಾಗಿ ಪ್ರತಿಪಾದಿಸುತ್ತಿರುವವರಲ್ಲಿ ಮರಾಠರು ಇದ್ದಾರೆ. ರಾಜ್ಯದಲ್ಲಿ ಹುಟ್ಟಿ ಬೆಳೆದು ಇಲ್ಲಿನ ನೆಲ, ಜಲ, ಭಾಷೆ, ಬದುಕಿನಲ್ಲಿ ಅವರು ಅವಿಭಾಜ್ಯ ಅಂಗವಾಗಿ ಕನ್ನಡಿಗರಾಗಿದ್ದಾರೆ. ಅವರೆಲ್ಲರೂ ಒಟ್ಟಾಗಿ ಶಾಂತಿ ಸೌಹಾರ್ದತೆಯಿಂದ ಬಾಳುವುದಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದ್ದಾರೆ.
ನಿಗಮ ಸ್ಥಾಪನೆ ಘೋಷಣೆ ನಂತರ ಕೆಲ ಕನ್ನಡಪರ ಸಂಘಟನೆಗಳು ಹೋರಾಟಗಾರರು ಮರಾಠಿಗಾರರ ವಿರುದ್ಧ ಆರೋಪ ಮಾಡುತ್ತಿರುವುದು ಬೇಸರ ತಂದಿದೆ. ಭಾಷಾ ಸಾಮರಸ್ಯಕ್ಕೆ ಧಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ. ಮರಾಠ ಎಂದರೆ ಭಾಷೆಯಲ್ಲ. ಅದು ಒಂದು ಜನಾಂಗ ಎಂದು ಮುಖ್ಯಮಂತ್ರಿಯವರು ಹೇಳಿರುವುದು ಸರಿಯಾಗಿದೆ. ಬೆಳಗಾವಿ ವಿಷಯದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿಕೆಯನ್ನು ಕರವೇ ಖಂಡಿಸುತ್ತದೆ.
ರಾಜ್ಯದಲ್ಲಿ ಹೆಚ್ಚು ಜನ ಸಂಖ್ಯೆ ಹೊಂದಿರುವ ಸಮುದಾಯಗಳ ಪೈಕಿ ಮರಾಠಿಗರು ನಾಲ್ಕನೇ ಸ್ಥಾನದಲ್ಲಿದ್ದಾರೆ. ಭಾಷಾ ಸಾಮರಸ್ಯ ಕದಡುವುದು ಬೇಡ. ಡಿ.5 ರಂದು ಕರೆ ನೀಡಿರುವ ಬಂದ್ ಹಿಂಪಡೆಯಬೇಕು ಎಂದು ಪೂಜಾರಿ ಕೋರಿದರು