ಕಲಬುರಗಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿ ವೇತನ ಪಡೆಯಲು ಆನ್ ಲೈನ್ ಅರ್ಜಿ ಅಹ್ವಾನಿಸಲಾಗಿದ್ದು, ಅರ್ಜಿಸಲಿಸುವ ಕಾಲವಕಾಶವನ್ನು ಜನವರಿ 15ರ ವರೆಗೆ ವಿಸ್ತರಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಎಸ್. ಮಹೆಬೂಬ್ ತಿಳಿಸಿದ್ದಾರೆ.
ಪ್ರೀ ಮ್ಯಾಟ್ರಿಕ್, ಪೊಸ್ಟ್ ಮ್ಯಾಟ್ರಿಕ್ ಹಾಗೂ ಮೆರಿಟ್ ಕಾಮ್ ಮಿನ್ಸ್ ವಿದ್ಯಾರ್ಥಿಗಳು ಅರ್ಜಿಸಲ್ಲಿಸಬಹುದಾಗಿದ್ದು, ಈಗಾಗಲೇ ಎರಡು ಬಾರಿ ಸೆಪ್ಟೆಂಬರ್ ಹಾಗೂ ನವೆಂಬರ್ ಆನ್ ಲೈನ್ ಅರ್ಜಿಸಲ್ಲಿಸುವ ಅವಧಿ ಕೊನೆಯಾಗಿತು. ಕೋವಿಡ್ ಹಿನ್ನೆಲೆಯಲ್ಲಿ ನಿಗದಿತ ವಿದ್ಯಾರ್ಥಿಗಳಿಗಿಂತ ಕಡಿಮೆ ಅರ್ಜಿಗಳು ಬಂದಿರುವ ಕಾರಣ ಮೂರನೇ ಬಾರಿ ಅರ್ಜಿಸಲ್ಲಿಸುವ ಅವಧಿ ವಿಸ್ತರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕೊರೊನಾ ಮಹಾಮಾರಿ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಲ್ಲಿ ನಡೆಯದಿರುವುದರಿಂದ ವಿದ್ಯಾರ್ಥಿಗಳಿಗೆ ಅರ್ಜಿಸಲ್ಲಿಸಲು ಸಮಸ್ಯೆ ಉಂಟಾಗಿದ್ದು, ಇಲಾಖೆಯ ಮೌಲಾನಾ ಆಜಾದ್, ಮುರಾಜಿ ದೇಸಾಯಿ ವಸತಿ ಶಾಲೆ ಹಾಗೂ ಅಲ್ಪಸಂಖ್ಯಾತರ ಇಲಾಖೆಯ ಕೇಂದ್ರಗಳಲ್ಲಿ ಶಾಲಾ, ಕಾಲೇಜು ವಿದ್ಯಾರ್ಥಿಗಳು, ಪೋಷಕರು ಹಾಗೂ ಶಾಲಾ ಸಿಬ್ಬಂದಿ ಮತ್ತು ಪ್ರಾಂಶುಪಾಲರು ಭೇಟಿ ನೀಡಿ ಉಚಿತ ಆನ್ ಲೈನ್ ಅರ್ಜಿಸಲ್ಲಿಸಲು ಈಗಾಗಲೇ ಆದೇಶ ನೋಡಲಾಗಿದೆ ಎಂದು ತಿಳಿಸಿದ್ದಾರೆ.