ಕೇಂದ್ರ ಸರಕಾರದ ವಿರೋಧಿ ನೀತಿ ವಿರೋಧಿಸಿ ಪ್ರಧಾನಮಂತ್ರಿಗೆ ಮನವಿ

0
38

ಶಹಾಪುರ : ಕೇಂದ್ರ ಸರ್ಕಾರ ಅನುಸರಿಸುತ್ತಿರುವ ವಿರೋದ ನೀತಿ ವಿರುದ್ಧವಾಗಿ ಕರ್ನಾಟಕ ರಾಜ್ಯ ಮೆಡಿಕಲ್ ಔಷಧಿ ಮಾರಾಟಗಾರರ ಪ್ರತಿನಿಧಿಗಳ ಸಂಘದ ವತಿಯಿಂದ ಶಹಾಪುರ ತಹಶೀಲ್ದಾರರ ಮುಖಾಂತರ ಮಾನ್ಯ ಭಾರತದ ಪ್ರಧಾನ ಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಪ್ರಸ್ತುತ ದಿನಮಾನಗಳಲ್ಲಿ ಕೇಂದ್ರ ಸರಕಾರ ಸಂಪೂರ್ಣವಾಗಿ ಕಾರ್ಮಿಕರನ್ನು ಹಾಗೂ ಖಾಸಗಿ ಕಂಪನಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರೆ ಸರಕಾರಿ ನೌಕರರನ್ನು ಕಡೆಗಣಿಸುತ್ತಿರುವದು ಸರಿಯಲ್ಲ. ಕೊರೋನಾ ಸಂಕಷ್ಟದಲ್ಲಿರುವ ಕಾರ್ಮಿಕರು ತುಂಬಾ ವ್ಯಥೆ ಪಡುವಂತ ಪರಿಸ್ಥಿತಿ ಎದುರಾಗಿದ್ದು ಕೂಡಲೇ ಕೇಂದ್ರ ಸರ್ಕಾರ ಇದನ್ನು ಕೈಬಿಡಬೇಕು ಎಂದು ಕರ್ನಾಟಕ ರಾಜ್ಯ ಮೆಡಿಕಲ್ ಔಷಧಿ ಮಾರಾಟಗಾರರ ಪ್ರತಿನಿಧಿಗಳ ಸಂಘದ ಗುಲ್ಬರ್ಗ ವಿಭಾಗೀಯ ಜಂಟಿ ಕಾರ್ಯದರ್ಶಿಗಳಾದ ವೀರಭದ್ರಯ್ಯಸ್ವಾಮಿ ಹೈಯ್ಯಾಳ ಮಾತನಾಡಿ ಮನವಿ ಪತ್ರ ಸಲ್ಲಿಸಿದರು.

Contact Your\'s Advertisement; 9902492681

ಕೇಂದ್ರ ಸರ್ಕಾರ ಬಹುದೊಡ್ಡ ಉದ್ಯಮಿಗಳಿಗೆ ಲಾಭ ಮಾಡಿಕೊಡುವ ದುರುದ್ದೇಶದಿಂದ ಹಾಗೂ ಕಾರ್ಮಿಕ ವಿರೋಧಿ ನೀತಿ ಜಾರಿಗೆ ತರುವುದರಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಕಾರ್ಮಿಕರನ್ನು ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವ ನೌಕರರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಲಿದೆ ಎಂದು ತಮ್ಮ ಅಳಲನ್ನು ತೋಡಿಕೊಂಡರು ಕಾರ್ಮಿಕರಿಗೆ ಇರುವ ಎಲ್ಲ ಸೌಲಭ್ಯಗಳನ್ನು ಕಸಿದುಕೊಳ್ಳುವ ಪ್ರಯತ್ನ ಇಂದು ಕೇಂದ್ರ ಸರ್ಕಾರ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರಕಾರ ವಿರೋಧ ನೀತಿಯನ್ನು ಕೂಡಲೇ ಕೈಬಿಡಬೇಕು ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಉಗ್ರವಾದ ಹೋರಾಟವನ್ನು ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು ಈ ಸಂದರ್ಭದಲ್ಲಿ ಪ್ರಕಾಶ್ ಪದಕಿ,ರತನ್, ರಾಜು ಮಲಾರ ಶೆಟ್ಟಿ,ಗಂಗಣ್ಣ ಸಂಡೂರು, ಮಹೇಶ್,ವಿನೋದ್ ಕಲಾಲ್ ಸಂಘದ ಪ್ರತಿನಿಧಿಗಳು ಹಾಗೂ ಇನ್ನಿತರರು ಹಾಜರಿದ್ದರು

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here