ಕಲಬುರಗಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಬಿ.ಎಡ್. ಹಾಗೂ ಡಿ.ಎಡ್. ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 25000 ರೂ.ಗಳ ವಿಶೇಷ ಪ್ರೋತ್ಸಾಹಧನ ನೀಡಲಾಗುತ್ತಿದೆ. ಇದಕ್ಕಾಗಿ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಜೈನ್ ಹಾಗೂ ಫಾರ್ಸಿ ಜನಾಂಗಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
ನ್ಯಾಷನಲ್ ಕೌನ್ಸಿಲ್ ಫಾರ್ ಟೀಚರ್ ಎಜ್ಯುಕೇಶನ್/ ಡಿಪಾಟ್‍ಮೆಂಟ್ ಆಫ್ ಸ್ಟೇಟ್ ಎಜ್ಯುಕೇಶನಲ್ ರಿಸರ್ಚ್ ಆ್ಯಂಡ್ ಟ್ರೇನಿಂಗ್‍ದಿಂದ ಮಾನ್ಯತೆ ಪಡೆದ ಸರ್ಕಾರಿ, ಅರೆ ಸರಕಾರಿ, ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ಬಿ.ಎಡ್. ಹಾಗೂ ಡಿ.ಎಡ್. ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯ ಮೊದಲನೇ ಮಹಡಿಯಲ್ಲಿರುವ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲಾತಿಗಳೊಂದಿಗೆ ಅಭ್ಯರ್ಥಿಗಳು ಖುದ್ದಾಗಿ 2020ರ ಡಿಸೆಂಬರ್ 21ರ ಸಂಜೆ 5 ಗಂಟೆಯೊಳಗಾಗಿ ಸಲ್ಲಿಸಬೇಕು. ಅವಧಿ ಮೀರಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ವಿದ್ಯಾರ್ಥಿಗಳು ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಮೇಲ್ಕಂಡ ಕಚೇರಿಯನ್ನು , ಕಚೇರಿ ದೂರವಾಣಿ ಸಂಖ್ಯೆ 08472-247260 ಹಾಗೂ ಇಲಾಖೆಯ https://dom.karnataka.gov.in ವೆಬ್‍ಸೆಟ್‍ನ್ನು ಸಂಪರ್ಕಿಸಲು ಕೋರಲಾಗಿದೆ.