ಶಹಾಬಾದ:ಹುಟ್ಟಿನಿಂದ ಹಿಡಿದು ಅವರ ಕೊನೆ ಉಸಿರು ಇರುವ ತನಕ ಅನೇಕ ಹೋರಾಟಗಳನ್ನು ಮಾಡಿ ಈ ದೇಶದಲ್ಲಿರುವ ಅವೈಜ್ಞಾನಿಕ ಪದ್ದತಿಯ ದಿಕ್ಕನ್ನೇ ಬದಲಾಯಿಸಿ ಹೊಸ ಬದಲಾವಣೆಯನ್ನು ತಂದಂತಹ ಮಹಾನ್ ವ್ಯಕ್ತಿ ಡಾ|ಬಿ.ಆರ್.ಅಂಬೇಡ್ಕರ್ ಎಂದು ನಗರಸಭೆಯ ಪೌರಾಯುಕ್ತ ಡಾ.ಕೆ.ಗುರಲಿಂಗಪ್ಪ ಹೇಳಿದರು.
ಅವರು ರವಿವಾರ ನಗರಸಭೆಯಲ್ಲಿ ಆಯೋಜಿಸಲಾದ ಡಾ|ಬಿ.ಆರ್.ಅಂಬೇಡ್ಕರ್ ರವರ ಮಹಾಪರಿನಿವರ್ಾಣ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಇಂದು ಸಮಾಜದಲ್ಲಿ ಅಂಬೇಡ್ಕರ್ ವೇಷಧಾರಿಗಳು ಕಾಣಸಿಗುತ್ತಾರೆಯೇ ಹೊರತು, ಅವರಂತೆ ನಡೆದುಕೊಳ್ಳುವವರು ಕಡಿಮೆ. ದೇಶ, ಸಮಾಜ ಮತ್ತು ತನ್ನವರಿಗಾಗಿ ಬಾಬಾಸಾಹೇಬರು ಬಾಳಿದಂತೆ ಬಾಳು ನಡೆಸಬಾಕಾದವರು ಬೇಕಾಗಿದೆ. ಕೇವಲ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಹಾಗೂ ಪೂಜೆ ಮಾಡುವುದಕ್ಕಿಂತಲೂ ಅವರ ಚರಿತ್ರೆಯನ್ನು ಅರಿತು ನಡೆಯಬೇಕಾಗಿದೆ.ಅಂಬೇಡ್ಕರ್ ಹಾಕಿಕೊಟ್ಟ ಮಾರ್ಗದಲ್ಲಿ ನಡೆಯುವ ಮೂಲಕ ಅವರಿಗೆ ಗೌರವ ಸಲ್ಲಿಸಿದಂತಾಗುತ್ತದೆ ಎಂದರು.
ನಗರಸಭೆಯ ಅಧ್ಯಕ್ಷೆ ಅಂಜಲಿ ಗಿರೀಶ ಕಂಬಾನೂರ, ಉಪಾಧ್ಯಕ್ಷೆ ಸಲೀಮಾಬೇಗಂ ಮೆಹಬೂಬ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಶೀದ್ ಮರ್ಚಂಟ್,ಮಾಜಿ ನಗರಸಭೆಯ ಅಧ್ಯಕ್ಷ ಗಿರೀಶ ಕಂಬಾನೂರ,ರಾಜೇಶ ಯನಗುಂಟಿಕರ್, ಕಿರಣ ಕೋರೆ,ಮೆಹಬೂಬ, ಇಮ್ಯಾನುವೆಲ್, ಕಂದಾಯ ಅಧಿಕಾರಿ ಸುನೀಲಕುಮಾರ, ಆರೋಗ್ಯ ನಿರೀಕ್ಷಕ ಶಿವರಾಜಕುಮಾರ ಜೆಟ್ಟೂರ್, ಹುಣೇಶ ದೊಡ್ಡಮನಿ, ಅನೀಲಕುಮಾರ ಹೊನಗುಂಟಿ,ಹಣಮಂತ ಪವಾರ, ಗೌತಮ, ಧೂಳಪ್ಪ, ರೌಫ್ ಸೇರಿದಂತರೆ ಅನೇಕರು ಹಾಜರಿದ್ದರು.