ಕಲಬುರಗಿ: ಶಹಾಬಾದ್ ತಾಲ್ಲೂಕಿನ ಮರತೂರು ಗ್ರಾಮದ ನಿವಾಸಿ ಕುರುಬ ಸಮಾಜದ ಹಿರಿಯ ಮುಖಂಡ ರಾಮಚಂದ್ರಪ್ಪ ಪೂಜಾರಿ ಧರ್ಮಾಪೂರ (102) ಭಾನುವಾರ ಮಧ್ಯಾಹ್ನ ನಿಧನರಾದರು.
ಮೃತರು ಪತ್ನಿ, ಮೂವರು ಪುತ್ರರು, ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಡಿಸೆಂಬರ್ 7ರಂದು ಮಧ್ಯಾಹ್ನ 2.30 ಗಂಟೆಗೆ ಸ್ವಂತ ಜಮೀನಿನಲ್ಲಿ ಅಂತ್ಯಕ್ರಿಯೆ ಜರುಗಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.